ಸಿಡ್ನಿ: ಮಣಿಕಟ್ಟಿನ ಮುರಿತಕ್ಕೆ ಒಳಗಾಗಿದ್ದ ಆಸ್ಟ್ರೇಲಿಯಾ ತಂಡದ ಸ್ಫೋಟಕ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಭಾರತ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಯ ಕೊನೆಯ ಮೂರು ಪಂದ್ಯಗಳಿಗೆ ಲಭ್ಯವಿದ್ದಾರೆ.

ಸದ್ಯ ನಡೆಯುತ್ತಿರುವ ಏಕದಿನ ಸರಣಿಯ ಬಳಿಕ ಅಕ್ಟೋಬರ್ 29ರಿಂದ 5 ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಈ ಸರಣಿಗೆ 37 ವರ್ಷದ ಸ್ಫೋಟಕ ಆಲ್ರೌಂಡರ್ ಮ್ಯಾಕ್ಸ್ವೆಲ್ ಆಸ್ಟ್ರೇಲಿಯಾ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇವರ ಜೊತೆಗೆ ಅಚ್ಚರಿ ಎಂಬಂತೆ ಯುವ ವೇಗಿ ಮಹ್ಲಿ ಬಿಯರ್ಡ್ಮನ್ ಟಿ20 ಸರಣಿಯ ಕೊನೆಯ ಮೂರು ಪಂದ್ಯಗಳಿಗೆ ಆಯ್ಕೆಯಾಗಿದ್ದಾರೆ.

ತಾರಾ ವೇಗಿ ಜೋಶ್ ಹ್ಯಾಜಲ್ವುಡ್ ಮತ್ತು ಬೌಲಿಂಗ್ ಆಲ್ರೌಂಡರ್ ಸೀನ್ ಅಬಾಟ್ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಲಭ್ಯವಿದ್ದಾರೆ.

ಮ್ಯಾಕ್ಸ್ವೆಲ್ ಸೆಪ್ಟೆಂಬರ್ ತಿಂಗಳಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೂ ಮೊದಲು ನೆಟ್ಸ್ನಲ್ಲಿ ಬೌಲಿಂಗ್ ಮಾಡುವಾಗ ಮಣಿಕಟ್ಟಿನ ಮುರಿತಕ್ಕೆ ಒಳಗಾಗಿದ್ದರು. ಇದೀಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.

20 ವರ್ಷದ ಬಿಯರ್ಡ್ಮನ್ 5 ಲಿಸ್ಟ್ ಎ ಪಂದ್ಯಗಳು ಮತ್ತು ಎರಡು ಬಿಗ್ ಬ್ಯಾಷ್ ಪಂದ್ಯಗಳಲ್ಲಿ ಆಡಿದ್ದು, ಗಮನಾರ್ಹ ಪ್ರದರ್ಶನ ತೋರಿದ್ದಾರೆ. ಹಾಗಾಗಿ ಅವರನ್ನು ಭಾರತ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿದೆ.
.ಆಸ್ಟ್ರೇಲಿಯಾಗೆ ಆಘಾತ: ನ್ಯೂಜಿಲೆಂಡ್ ಸರಣಿಯಿಂದ ಮ್ಯಾಕ್ಸ್ವೆಲ್ ಹೊರಕ್ಕೆ.Aus vs Ind ODI: ಎರಡನೇ ಪಂದ್ಯದಲ್ಲೂ ಸೋತು ಸರಣಿ ಕೈಚೆಲ್ಲಿದ ಭಾರತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.