ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG T20: ರೋಹಿತ್‌ಗೆ ವಿಶ್ರಾಂತಿ; ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್

Last Updated 12 ಮಾರ್ಚ್ 2021, 15:26 IST
ಅಕ್ಷರ ಗಾತ್ರ

ಅಹಮದಾಬಾದ್: ಆತಿಥೇಯ ಭಾರತ ವಿರುದ್ಧ ನಡೆಯುತ್ತಿರುವ ಮೊದಲ ಟಿ20 ಅಂತರ ರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಏಯಾನ್ ಮಾರ್ಗನ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ರೋಹಿತ್‌ಗೆ ವಿಶ್ರಾಂತಿ, ಭುವಿ ಇನ್...
ಭಾರತ ತಂಡದಲ್ಲಿ ಮೊದಲೆರಡು ಪಂದ್ಯಗಳಲ್ಲಿ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ಕಲ್ಪಿಸಲಾಗಿದೆ.

ಅತ್ತ ಗಾಯದಿಂದಾಗಿ ದೀರ್ಘ ಸಮಯದಿಂದ ತಂಡದಿಂದ ಹೊರಗುಳಿದಿರುವ ಬಲಗೈ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಪುನರಾಗಮನ ಮಾಡಿದ್ದಾರೆ.

ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಅಕ್ಷರ್ ಪಟೇಲ್ ಸಹ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಕನ್ನಡಿಗ ಕೆಎಲ್ ರಾಹುಲ್ ಜೊತೆಗೆ ಶಿಖರ್ ಧವನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ನಾಯಕ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಜೊತೆಗೆ ಸ್ಫೋಟಕ ಬ್ಯಾಟ್ಸ್‌ಮನ್ ಹಾರ್ದಿಕ್ ಪಾಂಡ್ಯ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಲಿದ್ದಾರೆ.

ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್ ಮತ್ತು ಯಜುವೇಂದ್ರ ಚಾಹಲ್ ಸಹ ತಂಡದಲ್ಲಿದ್ದಾರೆ.

ಪ್ಲೇಯಿಂಗ್ ಇಲೆವೆನ್ ಇಂತಿದೆ:

ಭಾರತ: ಕೆಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್ ಮತ್ತು ಯಜುವೇಂದ್ರ ಚಾಹಲ್

ಇಂಗ್ಲೆಂಡ್: ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡೇವಿಡ್ ಮಲಾನ್, ಜಾನಿ ಬೆಸ್ಟೊ, ಏಯಾನ್ ಮಾರ್ಗನ್ (ನಾಯಕ), ಬೆನ್ ಸ್ಟೋಕ್ಸ್, ಸ್ಯಾಮ್ ಕರನ್, ಜೋಫ್ರಾ ಆರ್ಚರ್, ಕ್ರಿಸ್ ಜಾರ್ಡನ್, ಆದಿಲ್ ರಶೀದ್ ಮತ್ತು ಮಾರ್ಕ್ ವುಡ್.

ಈ ಮೊದಲು ನಡೆದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 3-1ರ ಅಂತರದ ಭರ್ಜರಿ ಗೆಲುವು ದಾಖಲಿಸಿತ್ತು. ಈ ಮೂಲಕ ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲ ಅಗ್ರಸ್ಥಾನಕ್ಕೇರಿತ್ತಲ್ಲದೆ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡಿತ್ತು.

ಕೊನೆಯ ಎರಡು ಪಂದ್ಯಗಳನ್ನು ಅಹಮದಾಬಾದ್‌ನಲ್ಲಿ ನೂತನವಾಗಿ ನಿರ್ಮಿಸಿರುವ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿತ್ತು. ಈಗ ಐದು ಪಂದ್ಯಗಳ ಟಿ20 ಸರಣಿಗೂ ನರೇಂದ್ರ ಮೋದಿ ಸ್ಟೇಡಿಯಂ ವೇದಿಕೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT