ಮಂಗಳವಾರ, ಫೆಬ್ರವರಿ 7, 2023
27 °C

IND vs ENG Test: ಶತಕದ ಹೊಸ್ತಿಲಲ್ಲಿ ರೂಟ್; ಸವಾಲಿನ ಮೊತ್ತದತ್ತ ಇಂಗ್ಲೆಂಡ್‌

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನಾಟಿಂಗ್‌ಹ್ಯಾಂ: 95 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್‌ ಆರಂಭಿಸಿರುವ ಆತಿಥೇಯ ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌ ಅವರ ಅಮೋಘ ಬ್ಯಾಟಿಂಗ್‌ ಬಲದಿಂದ 140 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಇಂಗ್ಲೆಂಡ್‌ ಮೊದಲ ಇನಿಂಗ್ಸ್‌ನಲ್ಲಿ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 183 ರನ್‌ ಗಳಿಸಿತ್ತು. ಇದಕ್ಕುತ್ತರವಾಗಿ ಭಾರತ 278 ರನ್‌ಗಳಿಗೆ ಆಲೌಟ್‌ ಆಗಿತ್ತು.

ಇದನ್ನೂ ಓದಿ: 

ಎರಡನೇ ಇನಿಂಗ್ಸ್‌ ಆರಂಭಿಸಿದ ರೂಟ್‌ ಪಡೆ 46 ರನ್‌ ಆಗುವಷ್ಟರಲ್ಲಿ 2 ವಿಕೆಟ್‌ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯುವ ಆತಂಕದಲ್ಲಿತ್ತು. ಆದರೆ, ಮೂರನೇ ವಿಕೆಟ್‌ಗೆ ಜೊತೆಯಾದ ರೂಟ್‌ ಮತ್ತು ಡಾಮಿನಿಕ್‌ ಸಿಬ್ಲಿ 89 ರನ್‌ ಸೇರಿಸಿ ಚೇತರಿಕೆ ನೀಡಿದರು. ಸಿಬ್ಲಿ 28 ರನ್‌ ಗಳಿಸಿ ಔಟಾದರು. ನಂತರ ಬಂದ ಜಾನಿ ಬೈರ್ಸ್ಟ್ರೋವ್‌ (30) ಮತ್ತು ಡೆನಿಯಲ್‌ ಲಾರೆನ್ಸ್‌ (25) ನಾಯಕನ ಜೊತೆಗೂಡಿ ಕೆಲಕಾಲ ಇನಿಂಗ್ಸ್‌ ಬೆಳೆಸುವ ಪ್ರಯತ್ನ ಮಾಡಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರೂ ಗಟ್ಟಿಯಾಗಿ ನಿಂತು ಆಡುತ್ತಿರುವ ರೂಟ್‌, ಟೆಸ್ಟ್‌ ಕ್ರಿಕೆಟ್‌ನಲ್ಲಿ ತಮ್ಮ 21ನೇ ಶತಕದ ಹೊಸ್ತಿಲಲ್ಲಿದ್ದಾರೆ. 138 ಎಸೆತಗಳನ್ನು ಎದುರಿಸಿದ ಅವರು 13 ಬೌಂಡರಿ ಸಹಿತ 96 ರನ್‌ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಇನ್ನೊಂದು ತುದಿಯಲ್ಲಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಜಾಸ್‌ ಬಟ್ಲರ್‌ (15) ಆಡುತ್ತಿದ್ದಾರೆ.

ರೂಟ್‌ ಅವರ ಅಮೋಘ ಬ್ಯಾಟಿಂಗ್‌ ನೆರವಿನಿಂದ ಆಂಗ್ಲ ಪಡೆ ನಾಲ್ಕನೇ ದಿನ ಚಹಾ ವಿರಾಮದ ವೇಳೆಗೆ 5 ವಿಕೆಟ್‌ಗಳನ್ನು ಕಳೆದುಕೊಂಡು 235 ರನ್‌ ಗಳಿಸಿದೆ. ಭಾರತ ಪರ‌ ಜಸ್‌ಪ್ರೀತ್‌ ಬೂಮ್ರಾ ಹಾಗೂ ಮೊಹಮ್ಮದ್‌ ಸಿರಾಜ್‌ ತಲಾ ಎರಡು ವಿಕೆಟ್‌ ಉರುಳಿಸಿದ್ದು, ಇನ್ನೊಂದು ವಿಕೆಟ್‌ ಶಾರ್ದೂಲ್‌ ಠಾಕೂರ್‌ ಪಾಲಾಗಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು