ರಾಂಚಿ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ ಚೊಚ್ಚಲ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 307 ರನ್ನಿಗೆ ಆಲೌಟ್ ಆಗಿದೆ. ಆದರೂ ಮೊದಲ ಇನಿಂಗ್ಸ್‌ನಲ್ಲಿ 46 ರನ್‌ಗಳ ಹಿನ್ನಡೆಗೊಳಗಾಗಿದೆ.

ದಿಟ್ಟ ಬ್ಯಾಟಿಂಗ್ ಪ್ರದರ್ಶನ ತೋರಿದ ಧ್ರುವ್ ಜುರೇಲ್, ಕೇವಲ 10 ರನ್ ಅಂತರದಲ್ಲಿ ಚೊಚ್ಚಲ ಶತಕ (90) ವಂಚಿತರಾದರು.

7 ವಿಕೆಟ್‌ಗೆ 219 ರನ್‌ಗಳೊಡನೆ ಮೂರನೇ ದಿನದಾಟ ಮುಂದುವರಿಸಿದ ಭಾರತ ಊಟದ ವಿರಾಮಕ್ಕೆ ಕೆಲವೇ ಕ್ಷಣಗಳಿರುವಾಗ 103.2 ಓವರ್‌ಗಳಲ್ಲಿ 307 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

ಕುಲದೀಪ್ ಯಾದವ್ (28) ಅವರೊಂದಿಗೆ ಇನಿಂಗ್ಸ್ ಬೆಳೆಸಿದ ಜುರೇಲ್, ಎಂಟನೇ ವಿಕೆಟ್‌ಗೆ 76 ರನ್‌ಗಳ ಮಹತ್ವದ ಜೊತೆಯಾಟದಲ್ಲಿ ಭಾಗಿಯಾದರು.

ಎರಡನೇ ಟೆಸ್ಟ್ ಪಂದ್ಯ ಆಡುತ್ತಿರುವ ಜುರೇಲ್ ಚೊಚ್ಚಲ ಅರ್ಧಶತಕ ಗಳಿಸಿ ಮಿಂಚಿದರು. ರಕ್ಷಣಾತ್ಮಕ ಜೊತೆಗೆ ಆಕ್ರಮಣಕಾರಿ ಆಟವಾಡುವ ಮೂಲಕ ಗಮನ ಸೆಳೆದರು. ಆರು ಬೌಂಡರಿ ಹಾಗೂ ನಾಲ್ಕು ಸಿಕ್ಸಿರ್ ಸಿಡಿಸಿದರು.

ಆಕಾಶ್ ದೀಪ್ 9 ರನ್ ಗಳಿಸಿದರು. ಈ ಮೊದಲು ಭಾರತಕ್ಕೆ ಆಸರೆಯಾಗಿದ್ದ ಯಶಸ್ವಿ ಜೈಸ್ವಾಲ್ 73 ರನ್ ಗಳಿಸಿದ್ದರು.

ಇಂಗ್ಲೆಂಡ್ ಪರ 20 ವರ್ಷದ ಆಫ್ ಸ್ಪಿನ್ನರ್ ಶೋಯಬ್ ಬಷೀರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಐದು ವಿಕೆಟ್‌ಗಳ ಸಾಧನೆ ಮಾಡಿದರು. ಟಾಮ್ ಹಾರ್ಟ್ಲಿ ಮೂರು ಹಾಗೂ ಜೇಮ್ಸ್ ಆ್ಯಂಡರ್ಸನ್ ಎರಡು ವಿಕೆಟ್ ಗಳಿಸಿದರು.

ಜೋ ರೂಟ್ ಶತಕದ ಬೆಂಬಲದೊಂದಿಗೆ ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 353 ರನ್ ಗಳಿಸಿತ್ತು. ಭಾರತದ ಪರ ರವೀಂದ್ರ ಜಡೇಜ ನಾಲ್ಕು ಹಾಗೂ ಚೊಚ್ಚಲ ಪಂದ್ಯ ಆಡುತ್ತಿರುವ ಆಕಾಶ್ ದೀಪ್ ಮೂರು ವಿಕೆಟ್ ಕಬಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.