ಓವಲ್: ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿಭಾರತ ಆರಂಭಿಕ ಆಘಾತ ಅನುಭವಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಟೀಮ್ ಇಂಡಿಯಾವು ಭೋಜನ ವಿರಾಮದ ವೇಳೆಗೆ 54 ರನ್ ಗಳಿಸಿ ಅಗ್ರ ಕ್ರಮಾಂಕದ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಆರಂಭಿಕರಾದ ರೋಹಿತ್ ಶರ್ಮಾ(11) ಮತ್ತು ಕೆ.ಎಲ್. ರಾಹುಲ್(17) ಉತ್ತಮ ಆರಂಭ ನೀಡಿದರಾದರೂ ಕ್ರಮವಾಗಿ ಕ್ರಿಸ್ ವೋಕ್ಸ್ ಮತ್ತು ರಾಬಿನ್‌ಸನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು. ಕಳೆದ ಪಂದ್ಯದ 2ನೇ ಇನಿಂಗ್ಸ್‌ನಲ್ಲಿ ಮಿಂಚಿದ್ದ ಚೆತೇಶ್ವರ್ ಪೂಜಾರ(4) ಸಹ ಅಂಡರ್ಸನ್ ಬೌಲಿಂಗ್‌ನಲ್ಲಿ ಬೆಸ್ಟೋಗೆ ವಿಕೆಟ್ ಕ್ಯಾಚ್ ನೀಡಿ ಪೆವಿಲಿಯನ್ ಸೇರಿಕೊಂಡರು.
ನಾಯಕ ವಿರಾಟ್ ಕೊಹ್ಲಿ ಜೊತೆ ಸೇರಿಕೊಂಡಿರುವ ರವಿಂದ್ರ ಜಡೇಜಾ ಇನಿಂಗ್ಸ್ ಕಟ್ಟುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.