ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಬ್ಯಾಟಿಂಗ್‌ ವೈಫಲ್ಯಕ್ಕೆ ಬಿಡುವಿಲ್ಲದ ವೇಳಾಪಟ್ಟಿಯೇ ಕಾರಣ: ಸಲ್ಮಾನ್‌ ಬಟ್

Last Updated 27 ಆಗಸ್ಟ್ 2021, 8:22 IST
ಅಕ್ಷರ ಗಾತ್ರ

ಲೀಡ್ಸ್‌: ‘ಟೀಂ ಇಂಡಿಯಾದ ಬ್ಯಾಟಿಂಗ್ ವೈಫಲ್ಯಕ್ಕೆ ಬಿಡುವಿಲ್ಲದ ವೇಳಾಪಟ್ಟಿಯೇ ಕಾರಣ’ ಎಂದು ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಬಟ್ ಅಭಿಪ್ರಾಯಪಟ್ಟಿದ್ದಾರೆ.

ಎರಡನೇ ಟೆಸ್ಟ್‌ ಪಂದ್ಯದಲ್ಲಿ ಗೆಲುವು ಸಾಧಿಸಿದ ಹುಮ್ಮಸಿನಲ್ಲಿದ್ದ ಕೊಹ್ಲಿ ಪಡೆ ಮೂರನೇ ಟೆಸ್ಟ್‌ನಲ್ಲಿ ಹಿನ್ನಡೆ ಅನುಭವಿಸಿದೆ.

ಜೇಮ್ಸ್ ಆ್ಯಂಡರ್ಸನ್ ಮತ್ತು ಕ್ರೇಗ್ ಓವರ್ಟನ್ ಅವರ ವೇಗದ ದಾಳಿ ಭಾರತದ ಬಲಿಷ್ಠ ಬ್ಯಾಟಿಂಗ್‌ ಬಳಗಕ್ಕೆ ಆಘಾತ ನೀಡಿತ್ತು. ಹೀಗಾಗಿ ಇಂಗ್ಲೆಂಡ್ ಎದುರಿನ ಇನಿಂಗ್ಸ್‌ನಲ್ಲಿ ತಂಡ 78 ರನ್‌ಗಳಿಗೆ ಆಲೌಟ್‌ ಆಗಿತ್ತು. ಇದಕ್ಕೆ ಪ್ರತಿಯಾಗಿ ರೂಟ್‌ ಪಡೆ ಎರಡನೇ ದಿನದಾಟದ ಅಂತ್ಯಕ್ಕೆ 129 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 423 ರನ್‌ ಗಳಿಸಿದೆ. ಈ ಮೂಲಕ 345 ರನ್‌ ಮುನ್ನಡೆ ಸಾಧಿಸಿದೆ.

ಟೀಂ ಇಂಡಿಯಾಗೆ ನಾಯಕ ವಿರಾಟ್‌ ಕೊಹ್ಲಿ, ಅಂಜಿಕ್ಯ ರಹಾನೆ, ರೋಹಿತ್‌ ಶರ್ಮಾ, ಚೇತೇಶ್ವರ ಪೂಜಾರ ಸೇರಿದಂತೆ ಆಲ್‌ರೌಂಡರ್‌ಗಳ ಬ್ಯಾಟಿಂಗ್‌ ವೈಫಲ್ಯ ತಲೆನೋವಾಗಿ ಪರಿಣಾಮಿಸಿದೆ.

ಈ ಕುರಿತುತಮ್ಮ ಯೂಟ್ಯೂಬ್‌ ಚಾನಲ್‌ನಲ್ಲಿ ಮಾತನಾಡಿರುವ ಸಲ್ಮಾನ್ ಬಟ್, ‘ಟೀಂ ಇಂಡಿಯಾ ಬಹಳಷ್ಟು ಪಂದ್ಯಗಳನ್ನು ಆಡುತ್ತಿದೆ. ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಎಷ್ಟೇ ವೃತ್ತಿಪರ ಆಟಗಾರರಾದರೂ ಆಟದ ಸನ್ನಿವೇಶಕ್ಕೆ ತಕ್ಕಂತೆ ಅವರ ಮನಸ್ಸು ಪ್ರತಿಕ್ರಿಯಿಸುವುದಿಲ್ಲ. ಹಾಗಾಗಿ ಆಟದ ಬಗ್ಗೆ ಆಸಕ್ತಿ ಕಡಿಮೆಯಾಗುತ್ತದೆ. ಆದ್ದರಿಂದ ಉತ್ತಮ ಪ್ರದರ್ಶನ ನಿರೀಕ್ಷಿಸುವುದು ಕಷ್ಟವಾಗುತ್ತದೆ. ಆದರೂ, ಇಂಗ್ ವಿರುದ್ಧ ಟೀಂ ಇಂಡಿಯಾ ಆಟಗಾರರರು ಪ್ರತಿದಾಳಿ ನಡೆಸುವುದನ್ನು ನಿರೀಕ್ಷಿಸುತ್ತಿದ್ದೇನೆ’ ಹೇಳಿಕೊಂಡಿದ್ದಾರೆ.

ಡಬ್ಲ್ಯುಟಿಸಿ ಫೈನಲ್ಸ್‌ನಿಂದಾಗಿ ಭಾರತ, ಇಂಗ್ಲೆಂಡ್‌ ವಿರುದ್ಧ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಪೈಪೋಟಿ ನಡೆಸುತ್ತಿದೆ. ಈ ಸರಣಿ ನಂತರ ಯುಎಇನಲ್ಲಿ ಐಪಿಎಲ್‌ ಮತ್ತು ಟಿ–20 ವಿಶ್ವಕಪ್‌ನಲ್ಲಿ ಆಡಲಿದೆ. ಇದು ಆಟಗಾರರನ್ನು ಮಾನಸಿಕವಾಗಿ ದಣಿಯುವಂತೆ ಮಾಡುತ್ತಿದೆ. ಇತ್ತೀಚೆಗೆ ತನ್ನ ಎರಡನೇ ತಂಡವನ್ನು ಶ್ರೀಲಂಕಾಕ್ಕೂ ಕಳುಹಿಸಿತ್ತು. ಭಾರತ ತಂಡದ ಆಟಗಾರರ ಗುಣಮಟ್ಟದ ಬಗ್ಗೆ ಅನುಮಾನವಿಲ್ಲ. ಆದರೆ ಅತಿಯಾದ ಕ್ರಿಕೆಟ್‌ ಅವರ ಪ್ರದರ್ಶನ ಮಟ್ಟದ ಮೇಲೆ ಪ್ರಭಾವ ಬೀರುತ್ತಿದೆ ಎಂಬುದು ನನ್ನ ಅಭಿಪ್ರಾಯ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT