ಲಂಡನ್: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಶುಭಮನ್ ಗಿಲ್ ನಾಯಕತ್ವದ ಭಾರತ ತಂಡವು ಭಾನುವಾರ ಲಾರ್ಡ್ಸ್ ಮೈದಾನದಲ್ಲಿ ಅಭ್ಯಾಸ ಆರಂಭಿಸಿದೆ.

ಜೂನ್ 20ರಿಂದ ‘ತೆಂಡೂಲ್ಕರ್–ಆ್ಯಂಡರ್ಸನ್’ ಟ್ರೋಫಿಗಾಗಿ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.

ಭಾರತ ತಂಡದ ನೂತನ ನಾಯಕ ಶುಭಮನ್ ಗಿಲ್, ರಿಷಭ್ ಪಂತ್, ರವೀಂದ್ರ ಜಡೇಜಾ ಹಾಗೂ ವೇಗಿಗಳಾದ ಜಸ್ಪ್ರೀತ್ ಬೂಮ್ರಾ, ಪ್ರಸಿದ್ದ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್ ಅವರು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡಿದರು.

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಲಭ್ಯವಿರುವ ಕೆ.ಎಲ್. ರಾಹುಲ್, ಕರುಣ್ ನಾಯರ್ ಸೇರಿದಂತೆ ಕೆಲವು ಆಟಗಾರರು ವಾತಾವರಣಕ್ಕೆ ಹೊಂದಿಕೊಳ್ಳುವ ಉದ್ದೇಶದಿಂದ ಈಗಾಗಲೇ ಇಂಗ್ಲೆಂಡ್ ಲಯನ್ಸ್ ವಿರುದ್ಧ ಎರಡನೇ ಅನಧೀಕೃತ ಟೆಸ್ಟ್ ಪಂದ್ಯದಲ್ಲಿ ಆಡುತ್ತಿದ್ದಾರೆ.

2007ರ ನಂತರ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿ ಗೆಲುವಿಗಾಗಿ ಕಾಯುತ್ತಿರುವ ಭಾರತ ತಂಡವು ಈ ಬಾರಿ ಯುವ ಆಟಗಾರರೊಂದಿಗೆ ಕಣಕ್ಕಿಳಿದಿದೆ. ರೋಹಿತ್ ಶರ್ಮಾ ಅವರು ಟೆಸ್ಟ್ ನಾಯಕತ್ವ ತ್ಯಜಿಸಿದ ಮೇಲೆ ಶುಭಮನ್ ಗಿಲ್ ಅವರು ನೂತನ ನಾಯಕರಾಗಿ ಆಯ್ಕೆಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.