ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs NZ 2nd ODI: ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ, ಬೌಲಿಂಗ್ ಆಯ್ಕೆ

Last Updated 21 ಜನವರಿ 2023, 7:53 IST
ಅಕ್ಷರ ಗಾತ್ರ

ರಾಯಪುರ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಟೀಮ್ ಇಂಡಿಯಾ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಶುಭಮನ್ ಗಿಲ್ ಅಬ್ಬರದ ದ್ವಿಶತಕದ ಬಲದಿಂದ ಭಾರತ ತಂಡವು ಹೈದರಾಬಾದ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 12 ರನ್‌ಗಳ ಅಂತರದಿಂದ ಜಯ ಸಾಧಿಸಿತ್ತು. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶದ ಮೇಲೆ ರೋಹಿತ್ ಶರ್ಮಾ ಪಡೆ ಕಣ್ಣಿಟ್ಟಿದೆ.

ಕಿವೀಸ್ ತಂಡದ ಅಗ್ರಕ್ರಮಾಂಕದ ಬ್ಯಾಟರ್‌ಗಳನ್ನು ಬೇಗನೇ ನಿಯಂತ್ರಿಸಿದ್ದ ಟೀಮ್ ಇಂಡಿಯಾ ಬೌಲರ್‌ಗಳು ಮಧ್ಯಮ ಕ್ರಮಾಂಕವನ್ನು ಕಟ್ಟಿಹಾಕುವಲ್ಲಿ ವಿಫಲವಾಗಿತ್ತು. 350 ರನ್‌ಗಳ ಗುರಿ ಬೆನ್ನಟ್ಟಿದ್ದ ನ್ಯೂಜಿಲೆಂಡ್ 131 ರನ್‌ಗಳಿಗೆ ಆರು ವಿಕೆಟ್ ಕಳೆದುಕೊಂಡಿತ್ತು. ಆದರೆ ನಂತರ ಮಿಚೆಲ್ ಬ್ರೇಸ್‌ವೆಲ್ ಅಬ್ಬರದ ಶತಕದಿಂದಾಗಿ ಗೆಲುವಿನ ಸನಿಹ ಸಾಗಿತ್ತು.

ಶಾರ್ದೂಲ್ ಠಾಕೂರ್ ಮತ್ತು ಸಿರಾಜ್ ಅವರಿಬ್ಬರು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ ರನ್‌ಗಳನ್ನು ನಿಯಂತ್ರಿಸುವಲ್ಲಿ ಅವರೂ ಸೇರಿದಂತೆ ಆರು ಬೌಲರ್‌ಗಳು ಸಫಲರಾಗಿರಲಿಲ್ಲ. ಆದ್ದರಿಂದ ಈ ಪಂದ್ಯದಲ್ಲಿ ಬೌಲಿಂಗ್ ವಿಭಾಗದಲ್ಲಿ ಬದಲಾವಣೆಗಳನ್ನು ನಿರೀಕ್ಷಿಸಲಾಗಿತ್ತು. ಆದರೆ ಯಾವುದೇ ಬದಲಾವಣೆಗಳನ್ನು ನಾಯಕ ರೋಹಿತ್ ಮಾಡಿಲ್ಲ. ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಲಯಕ್ಕೆ ಮರಳಿದರೆ, ಕಿವೀಸ್ ಬೌಲಿಂಗ್‌ ಪಡೆಗೆ ಕಠಿಣ ಸವಾಲಾಗಬಹುದು.

ಪಿಚ್ ಹೇಗಿದೆ: ರಾಯಪುರದ ಶಹೀದ್ ವಿರನಾರಾಯಣ ಸಿಂಗ್ ಕ್ರೀಡಾಂಗಣದ ಪಿಚ್‌ ಬ್ಯಾಟರ್‌ಗಳಿಗೆ ಹೆಚ್ಚು ನೆರವಾಗುವ ಲಕ್ಷಣಗಳಿವೆ.

ತಂಡಗಳು
ಭಾರತ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್‌ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ನ್ಯೂಜಿಲೆಂಡ್: ಟಾಮ್ ಲಥಾಮ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೆ, ಹೆನ್ರಿ ನಿಕೊಲ್ಸ್, ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಬ್ರೆಸ್‌ವೆಲ್, ಮಿಚೆಲ್ ಸ್ಯಾಂಟನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗ್ಯುಸನ್, ಬ್ಲೇರ್ ಟಿಕ್ನರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT