ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND v NZ 3rd T20: ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ

Last Updated 1 ಫೆಬ್ರುವರಿ 2023, 13:24 IST
ಅಕ್ಷರ ಗಾತ್ರ

ಅಹಮದಾಬಾದ್‌: ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಣ ಮೂರನೇ ಹಾಗೂ ಕೊನೆಯ ಟಿ20 ಪಂದ್ಯ ಇಂದು ನಡೆಯುತ್ತಿದ್ದು, ಸರಣಿ ಕೈವಶ ಮಾಡಿಕೊಳ್ಳಲು ಉಭಯ ತಂಡಗಳು ಸೆಣಸಾಟ ನಡೆಸುತ್ತಿವೆ.

ನ್ಯೂಜಿಲೆಂಡ್ ವಿರುದ್ದ ಟಾಸ್‌ ಗೆದ್ದಿರುವ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊದಲ ಪಂದ್ಯವನ್ನು ನ್ಯೂಜಿಲೆಂಡ್‌ ಜಯಿಸಿದ್ದರೆ, ಲಖನೌದಲ್ಲಿ ನಡೆದಿದ್ದ ಎರಡನೇ ಪಂದ್ಯವನ್ನು ಭಾರತ ಗೆದ್ದು ಸಮಬಲ ಸಾಧಿಸಿತ್ತು. ತವರು ನೆಲದಲ್ಲಿ ಮತ್ತೊಂದು ಸರಣಿ ಗೆಲುವಿನ ಸಂಭ್ರಮ ಆಚರಿಸುವ ಸಿದ್ಧತೆಯೊಂದಿಗೆ ಹಾರ್ದಿಕ್‌ ಪಾಂಡ್ಯ ಬಳಗ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕಣಕ್ಕಿಳಿದಿದೆ.

ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವ ಭಾರತದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಒತ್ತಡದಲ್ಲೇ ಈ ಪಂದ್ಯ ಆಡಲಿದ್ದಾರೆ. ಯುವ ಆಟಗಾರರಾದ ಶುಭಮನ್‌ ಗಿಲ್, ಇಶಾನ್‌ ಕಿಶನ್‌ ಮತ್ತು ರಾಹುಲ್‌ ತ್ರಿಪಾಠಿ ಅವರು ಟಿ20 ಕ್ರಿಕೆಟ್‌ನಲ್ಲಿ ತಮಗೆ ದೊರೆತ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಂಡಿಲ್ಲ.

ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಮತ್ತು ಕೆ.ಎಲ್.ರಾಹುಲ್ ಅವರ ಬದಲು ಈ ಯುವ ಆಟಗಾರರಿಗೆ ತಂಡದಲ್ಲಿ ಸ್ಥಾನ ಲಭಿಸಿದೆ. ಆದರೆ ಏಕದಿನ ಪಂದ್ಯಗಳಲ್ಲಿ ತೋರಿದ್ದ ಅಬ್ಬರದ ಆಟ ಚುಟುಕು ಕ್ರಿಕೆಟ್‌ನಲ್ಲಿ ಮೂಡಿಬಂದಿಲ್ಲ.

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ದ್ವಿಶತಕ ಸಾಧನೆ ಬಳಿಕ ಇಶಾನ್‌, ಬ್ಯಾಟಿಂಗ್‌ ಲಯ ಕಳೆದುಕೊಂಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ತೋರಿದ್ದ ಪ್ರದರ್ಶನವನ್ನು ಟಿ20 ಮಾದರಿಯಲ್ಲಿ ಪುನರಾವರ್ತಿಸಲು ಗಿಲ್‌ ಅವರಿಗೆ ಸಾಧ್ಯವಾಗಿಲ್ಲ. ಕೊಹ್ಲಿ ಬದಲು ಮೂರನೇ ಕ್ರಮಾಂಕದಲ್ಲಿ ಆಡುವ ಅವಕಾಶ ಪಡೆದಿರುವ ತ್ರಿಪಾಠಿ ಅವರೂ ಪ್ರಭಾವಿ ಎನಿಸಿಲ್ಲ.

ಈ ಪಂದ್ಯದ ಬಳಿಕ ಭಾರತ ತಂಡ, ಮುಂದಿನ ಕೆಲವು ತಿಂಗಳು ಯಾವುದೇ ಟಿ20 ಪಂದ್ಯ ಆಡುವುದಿಲ್ಲ. ಆದ್ದರಿಂದ ಅಬ್ಬರದ ಆಟವಾಡಿ ತಮ್ಮ ಸಾಮರ್ಥ್ಯ ತೋರಿಸಲು ಯುವ ಆಟಗಾರರಿಗೆ ಸಿಗುವ ಕೊನೆಯ ಅವಕಾಶ ಇದಾಗಿದೆ.

ಇಂದಿನ ಪಂದ್ಯದಲ್ಲಿ ಭಾರತ ಯಜುವೇಂದ್ರ ಚಾಹಲ್ ಬದಲಿಗೆ ಉಮ್ರಾನ್ ಮಲಿಕ್‌ ಅವರನ್ನು ಕಣಕ್ಕಿಳಿಸಿದೆ.

ತಂಡಗಳು

ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್‌ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಆರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್: ಮಿಚೆಲ್ ಸ್ಯಾಂಟನರ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೆ (ವಿಕೆಟ್‌ಕೀಪರ್), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಡೆರಿಲ್ ಮಿಚೆಲ್, ಲಾಕಿ ಫರ್ಗ್ಯುಸನ್, ಈಶ್ ಸೋಧಿ, ಬೆನ್ ಲಿಸ್ಟರ್, ಬ್ಲೇರ್ ಟಿಕ್ನರ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT