ಜನವರಿ 11ರಿಂದ ತವರಿನಲ್ಲಿ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಶುಭಮನ್ ಗಿಲ್ ನಾಯಕತ್ವದ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿಲಾಗಿದೆ. ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ.

ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಶತಕ ಸಿಡಿಸಿ ಮಿಂಚಿದ್ದ ಋತುರಾಜ್ ಗಾಯಕವಾಡ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಬದಲು ಗಾಯದಿಂದ ಚೇತರಿಸಿಕೊಂಡಿರುವ ಉಪನಾಯಕ ಶ್ರೇಯಸ್ ಅಯ್ಯರ್ ಅವರಿಗೆ ಅವಕಾಶ ನೀಡಲಾಗಿದೆ.

ಇಬ್ಬರಿಗೆ ವಿಶ್ರಾಂತಿ

ಕೆಲಸದ ಹೊರೆ ಕಮ್ಮಿ ಮಾಡುವ ಉದ್ದೇಶದಿಂದಾಗಿ, ಆಯ್ಕೆ ಸಮಿತಿಯು ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಿದೆ. ಇಬ್ಬರೂ ಕೂಡ ಫೆಬ್ರವರಿಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ

ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಉಪನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್, ರಿಷಭ್ ಪಂತ್, ಯಶಸ್ವಿ ಜೈಸ್ವಾಲ್. ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ವೇಳಾಪಟ್ಟಿ

ಮೊದಲ ಏಕದಿನ ಪಂದ್ಯ: ಜನವರಿ 11- ವಡೋದರಾ

ಎರಡನೇ ಏಕದಿನ ಪಂದ್ಯ: ಜನವರಿ 14- ರಾಜಕೋಟ್

ಮೂರನೇ ಏಕದಿನ ಪಂದ್ಯ: ಜನವರಿ 18- ಇಂದೋರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.