ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs NZ | ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸರಣಿ ಕ್ಲೀನ್‌ಸ್ವೀಪ್

Last Updated 24 ಜನವರಿ 2023, 15:56 IST
ಅಕ್ಷರ ಗಾತ್ರ

ಇಂದೋರ್‌: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಮತ್ತು ಮೂರನೇ ಏಕದಿನ ಪಂದ್ಯದಲ್ಲಿ ಭಾರತ 90 ರನ್ ಅಂತರದಿಂದ ಗೆಲುವು ಸಾಧಿಸಿದೆ.

ಇದರೊಂದಿಗೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ 3–0 ಅಂತರದಿಂದ ಕ್ಲೀನ್‌ಸ್ವೀಪ್ ಸಾಧನೆ ಮಾಡಿದೆ.

ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿರುವ ಟೀಂ ಇಂಡಿಯಾ ಉತ್ತಮ ಆರಂಭ ಕಂಡಿದೆ. ಭಾರತದ ಪರ ಇನಿಂಗ್ಸ್‌ ಆರಂಭಿಸಿದ ನಾಯಕ ರೋಹಿತ್ ಶರ್ಮಾ (101) ಹಾಗೂ ಶುಭಮನ್‌ ಗಿಲ್‌ (112) ಶತಕ ಸಿಡಿಸಿ ಬಿರುಸಿನ ಬ್ಯಾಟಿಂಗ್‌ ನಡೆಸಿದರೆ, ಇತ್ತ ಹಾರ್ದಿಕ್‌ ಪಾಂಡ್ಯ ಅರ್ಧಶತಕ (54), ವಿರಾಟ್ ಕೊಹ್ಲಿ 36 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಅಂತಿಮವಾಗಿ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 385 ರನ್ ಗಳಿಸಿತು.

386 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ನ್ಯೂಜಿಲೆಂಡ್‌ 41.2 ಓವರ್‌ಗಳಲ್ಲಿ 295 ರನ್‌ ಗಳಿಸಿ ಆಲೌಟ್ ಆಯಿತು. ಆರಂಭಿಕ ಆಟಗಾರ ಫಿನ್ ಅಲೆನ್‌ ರನ್‌ ಖಾತೆ ತೆರೆಯುವ ಮುನ್ನವೇ ಔಟಾದರು. ಇತ್ತ ಡೆವೊನ್ ಕಾನ್ವೆ ಶತಕ (‌138), ಹೆನ್ರಿ ನಿಕೊಲ್ಸ್ (42), ಮಿಚೆಲ್ ಸ್ಯಾಂಟನರ್ (34), ಮಿಚೆಲ್ ಬ್ರೆಸ್‌ವೆಲ್ (26) ರನ್‌ ಗಳಿಸಿ ದಿಟ್ಟತನ ಪ್ರದರ್ಶಿಸಿದರು. ಆದರೆ, ಬಳಿಕ ಕ್ರೀಸ್‌ಗೆ ಬಂದ ಯಾವೊಬ್ಬ ಆಟಗಾರರನ್ನು ಹೆಚ್ಚು ಹೊತ್ತು ಆಟವಾಡಲಿಲ್ಲ.

ಭಾರತದ ಪರ ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ತಲಾ 3 ವಿಕೆಟ್ ಪಡೆದರೆ, ಯಜುವೇಂದ್ರ ಚಾಹಲ್ 2, ಹಾರ್ದಿಕ್ ಪಾಂಡ್ಯ ಮತ್ತು ಉಮ್ರಾನ್ ಮಲಿಕ್ ತಲಾ ಒಂದೊಂದು ವಿಕೆಟ್ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT