ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಭಾರತ ತಂಡವು ಈ ಪಂದ್ಯ ಗೆದ್ದರೆ, ಸತತ ಎರಡು ಟ್ರೋಫಿ ಗೆದ್ದ ಸಾಧನೆ ಮಾಡಲಿದೆ.

ಟಿ20 ವಿಶ್ವಕಪ್ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಇದುವರೆಗೆ 3 ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ ನ್ಯೂಜಿಲೆಂಡ್ ತಂಡವು ಮೇಲುಗೈ ಸಾಧಿಸಿದೆ.

ಈ ಬಾರಿಯ ವಿಶ್ವಕಪ್ನಲ್ಲಿ ಭಾರತ ತಂಡವು ಸಂಪೂರ್ಣ ಮೇಲುಗೈ ಸಾಧಿಸಿ ಫೈನಲ್ ಪ್ರವೇಶ ಪಡೆದುಕೊಂಡಿದೆ. ಆದರೆ, ನ್ಯೂಜಿಲೆಂಡ್ ತಂಡವು ಲೀಗ್ ಹಾಗೂ ಸೂಪರ್–8 ಎರಡೂ ಹಂತದಲ್ಲೂ ಸೋಲು ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದೆ.

ಆದರೆ, ಸೆಮಿಫೈನಲ್ನಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಸುಲುಭವಾಗಿ ಸೋಲಿಸಿರುವ ನ್ಯೂಜಿಲೆಂಡ್ ತಂಡವು ಆತ್ಮವಿಶ್ವಾಸದಲ್ಲಿ ಬೀಗುತ್ತಿದೆ. ಇತ್ತ ಇಂಗ್ಲೆಂಡ್ ತಂಡದ ವಿರುದ್ಧ ರೋಚಕ ಜಯ ಸಾಧಿಸಿದ ಭಾರತ ತಂಡವು ಸತತ ಎರಡನೇ ಬಾರಿ ಫೈನಲ್ ಪ್ರವೇಶಿಸಿದೆ.
.T20 WC Final: ಭಾರತ–ನ್ಯೂಜಿಲೆಂಡ್ ಹಣಾಹಣಿ: ಸಾಬರಮತಿ ತಟದಲ್ಲಿ ಸಾಮ್ರಾಟ ಯಾರು?.40 ಎಸೆತಗಳಲ್ಲಿ ಶತಕ; ಸಂಜು ಸ್ಯಾಮ್ಸನ್ ಮುಂದಿನ ಹಿಟ್ಮ್ಯಾನ್?.
ಹೆಡ್ ಟು ಹೆಡ್

ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ಹಾಗೂ ಭಾರತ ತಂಡಗಳು ಇದುವರೆಗೆ 3 ಬಾರಿ ಮುಖಾಮುಖಿಯಾಗಿದ್ದು, ಮೂರು ಬಾರಿಯೂ ನ್ಯೂಜಿಲೆಂಡ್ ತಂಡ ಗೆಲುವು ಸಾಧಿಸಿದೆ.

ಉಭಯ ತಂಡಗಳು 2007ರಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 10 ರನ್ಗಳ ಗೆಲುವು ಸಾಧಿಸಿತ್ತು.

ಬಳಿಕ 2016ರಲ್ಲಿ ನಡೆದ ಮುಖಾಮುಖಿಯಲ್ಲಿ, ನ್ಯೂಜಿಲೆಂಡ್ ನೀಡಿದ್ದ 127 ರನ್ಗಳ ಸುಲಭ ಗುರಿ ಮುಟ್ಟಲಾಗದೆ, ಭಾರತ ತಂಡವು 47 ರನ್ಗಳ ಹೀನಾಯ ಸೋಲು ಅನುಭವಿಸಿತ್ತು.

2021ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡವು ಮೊದಲು ಬ್ಯಾಟ್ ಮಾಡಿ ಕೇವಲ 117 ರನ್ ಕಲೆಹಾಕಿತ್ತು. ಈ ಸುಲಭ ಗುರಿ ಬೆನ್ನಟ್ಟಿದ ಕಿವೀಸ್ 14.3 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.