ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs SL: ಕೊಹ್ಲಿ 166*, ಗಿಲ್ 116: ಭಾರತ 390/5

Last Updated 15 ಜನವರಿ 2023, 12:14 IST
ಅಕ್ಷರ ಗಾತ್ರ

ತಿರುವನಂತಪುರ: ರನ್ ಮೆಶಿನ್ ಖ್ಯಾತಿಯ ವಿರಾಟ್ ಕೊಹ್ಲಿ (166*) ಹಾಗೂ ಉದೋಯನ್ಮುಖ ಬ್ಯಾಟರ್ ಶುಭಮನ್ ಗಿಲ್ (116) ಅಮೋಘ ಶತಕಗಳ ನೆರವಿನಿಂದ ಟೀಮ್ ಇಂಡಿಯಾ, ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ನಷ್ಟಕ್ಕೆ 390 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ.

ಏಕದಿನ ಕ್ರಿಕೆಟ್‌ನಲ್ಲಿ 46ನೇ ಶತಕ ಗಳಿಸಿದ ಮಾಜಿ ನಾಯಕ ವಿರಾಟ್ ಕೊಹ್ಲಿ, 110 ಎಸೆತಗಳಲ್ಲಿ 166 ರನ್ ಗಳಿಸಿ ಔಟಾಗದೆ ಉಳಿದರು. ಇದರಲ್ಲಿ 13 ಬೌಂಡರಿ ಹಾಗೂ ಎಂಟು ಸಿಕ್ಸರ್‌ಗಳು ಸೇರಿದ್ದವು.

ಆರಂಭಿಕರಾದ ನಾಯಕ ರೋಹಿತ್ ಶರ್ಮಾ ಹಾಗೂ ಗಿಲ್ ಮೊದಲ ವಿಕೆಟ್‌ಗೆ 95 ರನ್ ಪೇರಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ರೋಹಿತ್ 42 ರನ್ (49 ಎಸೆತ, 3 ಸಿಕ್ಸರ್, 2 ಬೌಂಡರಿ) ಗಳಿಸಿದರು.

ಬಳಿಕ ಗಿಲ್ ಜೊತೆಗೂಡಿದ ಕೊಹ್ಲಿ ಲಂಕಾ ಬೌಲರ್‌ಗಳನ್ನು ದಂಡಿಸಿದರು. ವಿರಾಟ್ ಹಾಗೂ ಗಿಲ್ ಎರಡನೇ ವಿಕೆಟ್‌ಗೆ 135 ರನ್‌ಗಳ ಜೊತೆಯಾಟ ಕಟ್ಟಿದರು.

ಗಿಲ್ ಏಕದಿನದಲ್ಲಿ ಎರಡನೇ ಶತಕ ಸಾಧನೆ ಗಳಿಸಿದರು. 97 ಎಸೆತಗಳನ್ನು ಎದುರಿಸಿದ ಗಿಲ್ 14 ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳಿಂದ 116 ರನ್ ಗಳಿಸಿದರು.

ಕೊನೆಯ ಹಂತದಲ್ಲಿ ಬಿರುಸಾಗಿ ಬ್ಯಾಟ್ ಬೀಸಿದ ಕೊಹ್ಲಿ, ಈ ಸರಣಿಯಲ್ಲಿ ಎರಡನೇ ಶತಕ ಗಳಿಸಿದರು. ಲಂಕಾ ಪರ ಕಸುನ್ ರಜಿತ ಹಾಗೂ ಲಹಿರು ಕುಮಾರ ತಲಾ ಎರಡು ವಿಕೆಟ್ ಗಳಿಸಿದರು.

ಮೂರು ಪಂದ್ಯಗಳ ಏಕದಿನ ಸರಣಿಯನ್ನು ಈಗಾಗಲೇ 2-0 ಅಂತರದಲ್ಲಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ, ಸರಣಿ ಕ್ಲೀನ್ ಸ್ವೀಪ್‌ಗೈಯುವ ಇರಾದೆಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT