ಲಖನೌ: ಏಕದಿನ ಕ್ರಿಕೆಟ್ ಸರಣಿಯಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದಿರುವ ಭಾರತ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಮಳೆಯಿಂದಾಗಿ ಟಾಸ್ ಒಂದು ಗಂಟೆಗೂ ಹೆಚ್ಚು ಕಾಲ ವಿಳಂಬವಾಗಿತ್ತು. ಪಂದ್ಯವನ್ನು 40 ಓವರ್‌ಗಳಿಗೆ ಸೀಮಿತಗೊಳಿಸಲಾಗಿದೆ.

ಮುಂದಿನ ವರ್ಷ ಭಾರತದಲ್ಲಿಯೇ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಅವಕಾಶ ಪಡೆಯುವ ಉತ್ಸಾಹದಲ್ಲಿರುವ ಯುವಪಡೆಯು ಇಂದು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದೆ.

ಟಿ20 ಸರಣಿಯಲ್ಲಿ 2–1ರಿಂದ ಗೆದ್ದ ರೋಹಿತ್ ಶರ್ಮಾ ಬಳಗದ ಬಹುತೇಕ ಆಟಗಾರರು ಚುಟುಕು ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ. ಇದರಿಂದಾಗಿ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾರತ ತಂಡವನ್ನು ಎಡಗೈ ಬ್ಯಾಟರ್ ಶಿಖರ್ ಧವನ್ ಮುನ್ನಡೆಸುತ್ತಿದ್ದಾರೆ.

ಅಡುವ ಹನ್ನೊಂದರ ಬಳಗ ಇಂತಿದೆ:

ಭಾರತ: ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕವಾಡ, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್‌ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೊಯಿ, ಆವೇಶ್ ಖಾನ್, ಮೊಹಮ್ಮದ್ ಸಿರಾಜ್

ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿಕಾಕ್ (ವಿಕೆಟ್‌ಕೀಪರ್), ಜೇನ್ಮೆನ್ ಮಲಾನ್, ಏಡನ್ ಮರ್ಕರಂ, ಎನ್ರಿಚ್ ನಾಕಿಯಾ, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ, ಕಗಿಸೊ ರಬಾಡ, ಲುಂಗಿ ಗಿಡಿ, ತಬ್ರೇಜ್ ಶಮ್ಸಿ

ಪಿಚ್ ರಿಪೋರ್ಟ್
ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಎಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ 2020ರ ಮಾರ್ಚ್‌ನಲ್ಲಿ ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಏಕದಿನ ಪಂದ್ಯವು ಕೋವಿಡ್ ಲಾಕ್‌ಡೌನ್ ಕಾರಣದಿಂದ ರದ್ದಾಗಿತ್ತು. ಅದರಿಂದಾಗಿ ಈ ಅಂಗಣದಲ್ಲಿ ಉಭಯ ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗಲಿವೆ. 2019ರಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಫ್ಗಾನಿಸ್ತಾನ ತಂಡಗಳು ಮೂರು ಪಂದ್ಯಗಳನ್ನು ಇಲ್ಲಿ ಆಡಿದ್ದವು.

ಇಲ್ಲಿಯ ಪಿಚ್ ಕಪ್ಪುಮಣ್ಣಿನ ಮೇಲ್ಪದರ ಹೊಂದಿದೆ. ಬ್ಯಾಟರ್‌ಗಳಿಗೆ ಹೆಚ್ಚು ನೆರವು ನೀಡುವ ಸಾಧ್ಯತೆ ಇದೆ. ಇನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಹಾಗೂ ಕೊನೆಯಲ್ಲಿ ಸ್ಪಿನ್ನರ್‌ಗಳಿಗೆ ತುಸು ನೆರವು ಸಿಗಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.