ಶುಕ್ರವಾರ, ಮೇ 20, 2022
26 °C

IND vs SA: ಭಾರತದ ವಿರುದ್ಧ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಪಾರ್ಲ್, ದಕ್ಷಿಣ ಆಫ್ರಿಕಾ: ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ರೋಹಿತ್‌ ಶರ್ಮಾ ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆ.ಎಲ್‌.ರಾಹುಲ್‌ ತಂಡವನ್ನು ಮುನ್ನಡೆಸುತ್ತಿದ್ದಾರೆ.

ವಿರಾಟ್ ಮೂರು ಮಾದರಿಯ ಕ್ರಿಕೆಟ್‌ ತಂಡಗಳ ನಾಯಕತ್ವದಿಂದ ಕೆಳಗಿಳಿದ ನಂತರ ಬ್ಯಾಟರ್ ಆಗಿ ಕಣಕ್ಕಿಳಿಯುತ್ತಿರುವ ಮೊದಲ ಪಂದ್ಯ ಇದು. ಆದ್ದರಿಂದಲೇ ಎಲ್ಲರ ಕುತೂಹಲದ ಕಣ್ಣುಗಳು ಅವರತ್ತ ನೆಟ್ಟಿವೆ.

ಈ ಪಂದ್ಯದ ಮೂಲಕ ವೆಂಕಟೇಶ್ ಅಯ್ಯರ್ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.

ತಂಡಗಳು:
ಭಾರತ:
ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ವೆಂಕಟೇಶ್ ಅಯ್ಯರ್, ಆರ್. ಅಶ್ವಿನ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್,  ಜಸ್‌ಪ್ರೀತ್ ಬೂಮ್ರಾ, ಯಜುವೇಂದ್ರ ಚಾಹಲ್

ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ರಸಿ ವ್ಯಾನ್ ಡರ್ ಡಸೆನ್, ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ಜೆನ್‌ಮನ್ ಮಲಾನ್,  ಡೇವಿಡ್ ಮಿಲ್ಲರ್, ಏಡನ್ ಮರ್ಕರಮ್, ಆ್ಯಂಡಿಲ್ ಪಿಶುವಾಯೊ, ಮಾರ್ಕೊ ಜ್ಯಾನ್ಸೆನ್, ಕೇಶವ್ ಮಹಾರಾಜ, ತಬ್ರೇಜ್ ಶಮ್ಸಿ, ಲುಂಗಿ ಗಿಡಿ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು