ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs SA 1st T20I: ಮಳೆಯದ್ದೇ ಆಟ; ಮೊದಲ ಪಂದ್ಯ ರದ್ದು

Published 10 ಡಿಸೆಂಬರ್ 2023, 13:53 IST
Last Updated 10 ಡಿಸೆಂಬರ್ 2023, 13:53 IST
ಅಕ್ಷರ ಗಾತ್ರ

ಡರ್ಬನ್: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.

ಸತತವಾಗಿ ಸುರಿದ ಮಳೆಯ ಕಾರಣ ಟಾಸ್ ಕೂಡ ನಡೆಯದೇ ಪಂದ್ಯ ರದ್ದಾಯಿತು. ಇದರಿಂದ ಪಂದ್ಯಕ್ಕಾಗಿ ಕಾತರದಿಂದ ಕಾದು ಕುಳಿತಿದ್ದ ಅಭಿಮಾನಿಗಳಿಗೆ ನಿರಾಸೆ ಉಂಟಾಯಿತು.

ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಡಿಸೆಂಬರ್ 12, ಮಂಗಳವಾರದಂದು ಸೈಂಟ್ ಜಾರ್ಜ್ಸ್ ಪಾರ್ಕ್‌ನಲ್ಲಿ ನಡೆಯಲಿದೆ. ಸರಣಿಯ ಅಂತಿಮ ಪಂದ್ಯ ಡಿ.14ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಿಗದಿಯಾಗಿದೆ.

ಸೂರ್ಯಕುಮಾರ್ ನಾಯಕ...

ಯುವ ಪ್ರತಿಭಾನ್ವಿತ ಆಟಗಾರರಿಂದ ಕೂಡಿರುವ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದಾರೆ. ಆದರೆ ಪಂದ್ಯ ರದ್ದುಗೊಂಡ ಕಾರಣ ಯುವ ಆಟಗಾರರು ಅವಕಾಶ ವಂಚಿತರಾಗಿದ್ದಾರೆ.

ಇತ್ತೀಚೆಗೆ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಸೂರ್ಯ ನಾಯಕತ್ವದಲ್ಲೇ ಭಾರತ 4-1ರ ಅಂತರದ ಗೆಲುವು ಸಾಧಿಸಿತ್ತು.

ಅದೇ ಆತ್ಮವಿಶ್ವಾಸದೊಂದಿಗೆ ಭಾರತ ತಂಡ ದಕ್ಷಿಣ ಆಫ್ರಿಕಾ ಪರ್ಯಟನೆ ನಡೆಸಿದೆ. ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಋತುರಾಜ್ ಗಾಯಕವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ, ರವಿ ಬಿಷ್ಣೋಯಿ, ಮುಕೇಶ್ ಕುಮಾರ್ ಮುಂತಾದ ಯುವ ಆಟಗಾರರು ತಂಡದಲ್ಲಿದ್ದಾರೆ.

ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡವನ್ನು ಏಡನ್ ಮರ್ಕರಮ್ ಮುನ್ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT