ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs SA 2nd T20I: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ

Published 12 ಡಿಸೆಂಬರ್ 2023, 14:42 IST
Last Updated 12 ಡಿಸೆಂಬರ್ 2023, 14:42 IST
ಅಕ್ಷರ ಗಾತ್ರ

ಗೆಬೆರ್ಹಾ (ದಕ್ಷಿಣ ಆಫ್ರಿಕಾ): ಭಾರತ ವಿರುದ್ಧ ನಡೆಯುತ್ತಿರುವ ದ್ವಿತೀಯ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿದೆ.

ಡರ್ಬನ್‌ನಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತ್ತು. ಈ ಪಂದ್ಯಕ್ಕೂ ಮಳೆಯ ಭೀತಿ ಕಾಡಿತ್ತು.

ಅನಾರೋಗ್ಯದ ಕಾರಣ ಋತುರಾಜ್ ಗಾಯಕ್‌ವಾಡ್ ಆಯ್ಕೆಗೆ ಲಭ್ಯರಾಗಿಲ್ಲ. ಯಶಸ್ವಿ ಜೈಸ್ವಾಲ್ ಜೊತೆ ಶುಭಮನ್ ಗಿಲ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

ಭಾರತ ತಂಡದೊಡನೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಿರುವ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಈ ಪಂದ್ಯದಲ್ಲಿ ಅವಕಾಶ ದೊರಕಲಿದೆ.

ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್‌ಗೆ ಮೊದಲು ಭಾರತಕ್ಕೆ ಒಟ್ಟು ಐದು ಚುಟುಕು ಕ್ರಿಕೆಟ್‌ ಪಂದ್ಯಗಳಷ್ಟೇ ಆಡಲಿದೆ. ಹೀಗಾಗಿ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿರುವ ‘ಚಿಂತಕರ ಚಾವಡಿ’ಯ ಮುಂದೆ ಸವಾಲು ಇದೆ.

ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಇತ್ತೀಚೆಗೆ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಭಾರತ 4-1ರ ಅಂತರದ ಗೆಲುವು ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT