ನವದೆಹಲಿ: ಇಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ 99 ರನ್‌ಗಳಿಗೆ ಆಲೌಟ್ ಆಗಿದೆ.
ಮಲಾನ್ 15, ಕ್ಲಾಸಿನ್ 34 ಮತ್ತು ಜೇಸನ್ 14 ರನ್ ಗಳಿಸಿದ್ದು ಬಿಟ್ಟರೆ, ದಕ್ಷಿಣ ಆಫ್ರಿಕಾದ ಬೇರೆ ಯಾವ ಬ್ಯಾಟರ್ ಸಹ ಒಂದಂಕಿ ದಾಟಲಿಲ್ಲ.
4.1 ಓವರ್‌ಗಳಲ್ಲಿ 18 ರನ್ ನೀಡಿ 4 ವಿಕೆಟ್ ಕಬಳಿಸಿದ ಕುಲದೀಪ್ ಯಾದವ್ ಯಶಸ್ವಿ ಬೌಲರ್ ಎನಿಸಿದರು. ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್ ಮತ್ತು ಶಹಬಾಜ್ ಅಹ್ಮದ್ ತಲಾ ಎರಡು ವಿಕೆಟ್ ಉರುಳಿಸಿ ಗಮನ ಸೆಳೆದರು.
ಆರಂಭದಲ್ಲೇ ಅವೇಶ್ ಖಾನ್ ಅವರು, ಡಿ ಕಾಕ್‌ಗೆ ಪೆವಿಲಿಯನ್ ದಾರಿ ತೋರಿಸಿದರು. ಇದಾದ ಬಳಿಕ, ಯಾವೊಬ್ಬ ಆಟಗಾರನೂ ಕ್ರಿಸ್‌ಗೆ ಕಚ್ಚಿ ಆಡಲಿಲ್ಲ. ಭಾರತದ ಕರಾರುವಾಕ್ ಬೌಲಿಂಗ್ ದಾಳಿಗೆ ಆಫ್ರಿಕಾ ಬ್ಯಾಟರ್‌ಗಳ ಬಳಿ ಉತ್ತರವೇ ಇರಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.