ಮಂಗಳವಾರ, ಜನವರಿ 28, 2020
17 °C

India vs Sri Lanka ಟಿ20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಟೀಂ ಇಂಡಿಯಾ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಗುವಾಹಟಿ: ಶ್ರೀಲಂಕಾ ವಿರುದ್ಧದ ಟ್ವೆಂಟಿ–20 ಕ್ರಿಕೆಟ್‌ ಸರಣಿಯ ಮೊದಲ ಪಂದ್ಯ ಇಲ್ಲಿನ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.

ನಾಲ್ಕು ತಿಂಗಳಿಂದ ಬೆನ್ನಿನ ಗಾಯದಿಂದಾಗಿ ವಿಶ್ರಾಂತಿ ಪಡೆದಿದ್ದ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ತಂಡಕ್ಕೆ ಮರಳಿದ್ದು, ಬೌಲಿಂಗ್ ವಿಭಾಗಕ್ಕೆ ಬಲ ನೀಡಿದೆ. ‘ಹಿಟ್‌ಮ್ಯಾನ್‌’ ರೋಹಿತ್ ಶರ್ಮಾ ವಿಶ್ರಾಂತಿಯಲ್ಲಿದ್ದು, ಅವರ ಬದಲು ಶಿಖರ್ ಧವನ್ ಅವರು ಕನ್ನಡಿಗ ಕೆ.ಎಲ್. ರಾಹುಲ್ ಜೊತೆ ಇನಿಂಗ್ಸ್ ಆರಂಭಿಸಲಿದ್ದಾರೆ.

ವಿಕೆಟ್‌ಕೀಪರ್ ರಿಷಭ್ ಪಂತ್‌ಗೆ ಸಾಮರ್ಥ್ಯ ಸಾಬೀತು ಮಾಡಲು ಇದು ಬಹುತೇಕ ಕೊನೆಯ ಅವಕಾಶವಾಗಬಹುದು ಎನ್ನಲಾಗುತ್ತಿದೆ. ಈ ಪಂದ್ಯದಲ್ಲಿ ಅವರು ವಿಫಲರಾದರೆ ಅವರ ಬದಲಿಗೆ ಸಂಜು ಸ್ಯಾಮ್ಸನ್‌ ಅವಕಾಶ ಪಡೆಯುವ ಸಾಧ್ಯತೆ ಇದೆ.

ಮತ್ತೊಂದೆಡೆ, ಲಸಿತ್ ಮಾಲಿಂಗ ನಾಯಕತ್ವದ ಲಂಕಾ ತಂಡವು ಈಚೆಗೆ ಆಸ್ಟ್ರೇಲಿಯಾದಲ್ಲಿ 0–3ರಿಂದ ಸೋಲನುಭವಿಸಿ ಬಂದಿದೆ. ಆ ಟೂರ್ನಿಯಲ್ಲಿ ಚೆನ್ನಾಗಿ ಆಡಿದ್ದ ಕುಶಾಲ ಪೆರೆರಾ ಮೇಲೆ ಹೆಚ್ಚು ಅವಲಂಬಿತವಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು