ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs SL ಟೆಸ್ಟ್ | ಜಡೇಜ ಶತಕ; ಇನಿಂಗ್ಸ್ ಹಿನ್ನಡೆ ಭೀತಿಯಲ್ಲಿ ಲಂಕಾ

Last Updated 5 ಮಾರ್ಚ್ 2022, 13:08 IST
ಅಕ್ಷರ ಗಾತ್ರ

ಮೊಹಾಲಿ: ಆಲ್‌ರೌಂಡರ್‌ ರವೀಂದ್ರ ಜಡೇಜ ಸಿಡಿಸಿದ ಅಮೋಘ ಶತಕದ ಬಲದಿಂದ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 8 ವಿಕೆಟ್‌ ನಷ್ಟಕ್ಕೆ 567 ರನ್‌ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿರುವ ಲಂಕಾ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಇನಿಂಗ್ಸ್ ಹಿನ್ನಡೆಯ ಭೀತಿಯಲ್ಲಿದೆ.

ಇಲ್ಲಿನ ಪಂಜಾಬ್ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭವಾದ ಪಂದ್ಯದಲ್ಲಿ, ಭಾರತ ತಂಡ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿತು. ರೋಹಿತ್ ಶರ್ಮಾ ಬಳಗದ ಇನಿಂಗ್ಸ್‌ಗೆಜಡೇಜ ಬಾರಿಸಿದ ಶತಕ, ವಿಕೆಟ್‌ ಕೀಪರ್‌ ರಿಷಭ್‌ ಪಂತ್ (96), ಹನುಮ ವಿಹಾರಿ (58) ಮತ್ತು ಆರ್‌.ಅಶ್ವಿನ್ (61) ಗಳಿಸಿದ ಅರ್ಧಶತಕಗಳು ಬಲ ತುಂಬಿದವು.

228 ಎಸೆತಗಳನ್ನು ಎದುರಿಸಿದ ಜಡೇಜ, 17 ಬೌಂಡರಿ ಮತ್ತು 3 ಸಿಕ್ಸರ್‌ ಸಹಿತ ಅಜೇಯ 175 ರನ್‌ ಕಲೆಹಾಕಿದರು.

ಭಾರತದ ಇನಿಂಗ್ಸ್‌ಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ, 108 ರನ್‌ ಗಳಿಗೆ 4 ವಿಕೆಟ್‌ ಕಳೆದುಕೊಂಡಿದೆ. ಮೊದಲ ಇನಿಂಗ್ಸ್‌ನ ಬಾಕಿ ಚುಕ್ತಾ ಮಾಡಲು ಇನ್ನೂ 466 ರನ್ ಗಳಿಸಬೇಕಿದ್ದು, ಹಿನ್ನಡೆಯ ಆತಂಕದಲ್ಲಿದೆ.

ಸದ್ಯ 26 ರನ್‌ ಗಳಿಸಿರುವಪಾಥುಮ್ ನಿಶಾಂಕ ಮತ್ತು 1 ರನ್ ಗಳಿಸಿರುವ ಚರಿತಾ ಅಸಲಂಕಾ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT