ಮಂಗಳವಾರ, ಜನವರಿ 28, 2020
24 °C

ಟಿ–20 ಕ್ರಿಕೆಟ್: ಟೀಂ ಇಂಡಿಯಾ ವಿರುದ್ಧ ಟಾಸ್‌ ಗೆದ್ದ ಶ್ರೀಲಂಕಾ, ಬೌಲಿಂಗ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುಣೆ: ಭಾರತದ ಎದುರಿನ ಟ್ವೆಂಟಿ–20 ಕ್ರಿಕೆಟ್ ಸರಣಿಯ ಮೂರನೇ ಕ್ರಿಕೆಟ್‌ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಶ್ರೀಲಂಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.

ಗುವಾಹಟಿಯಲ್ಲಿ ನಡೆಯಬೇಕಾಗಿದ್ದ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇಂದೋರ್‌ನಲ್ಲಿ ಮೂರು ದಿನಗಳ ಹಿಂದೆ ನಡೆದಿದ್ದ ಎರಡನೇ ಪಂದ್ಯದಲ್ಲಿ ಭಾರತ ಏಳು ವಿಕೆಟ್‌ಗಳ ಜಯ ಸಾಧಿಸಿತ್ತು. ಆದ್ದರಿಂದ ವಿರಾಟ್ ಕೊಹ್ಲಿ ಬಳಗ ಪುಣೆಯಲ್ಲಿ ಸುಲಭ ಜಯದ ವಿಶ್ವಾಸದಲ್ಲಿದೆ. 

ತಂಡಗಳು

ಭಾರತ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆ.ಎಲ್‌.ರಾಹುಲ್, ಶ್ರೇಯಸ್ ಅಯ್ಯರ್, ಜಸ್‌ಪ್ರೀತ್ ಬೂಮ್ರಾ, ನವದೀಪ್ ಸೈನಿ, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಮನೀಷ್ ಪಾಂಡೆ, ಯಜುವೇಂದ್ರ ಚಾಹಲ್

ಶ್ರೀಲಂಕಾ: ಲಸಿತ್ ಮಾಲಿಂಗ (ನಾಯಕ), ಧನುಷ್ಕ ಗುಣತಿಲಕ, ಆವಿಷ್ಕ ಫರ್ನಾಂಡೊ, ದಸುನ್ ಶಾನಕ, ಕುಶಾಲ್ ಪೆರೇರ,  ಧನಂಜಯ ಡಿ ಸಿಲ್ವ, ಇಸುರು ಉಡಾನ, ಒಶಾಡ ಫರ್ನಾಂಡೊ, ವನಿಂದು ಹಸರಂಗ, ಲಾಹಿರು ಕುಮಾರ, ಏಂಜೆಲೊ ಮ್ಯಾಥ್ಯೂಸ್

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು