IND vs SL 2nd ODI: ಶ್ರೀಲಂಕಾ ಮಧ್ಯಮ ಕ್ರಮಾಂಕಕ್ಕೆ ಪೆಟ್ಟು ಕೊಟ್ಟ ಭಾರತ

ಕೋಲ್ಕತ್ತ: ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಮಾಡುತ್ತಿದೆ.
25 ಓವರ್ ಅಂತ್ಯಕ್ಕೆ ಶ್ರೀಲಂಕಾ ತಂಡ 6 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ. ನುವನಿದು ಫರ್ನಾಂಡೊ(50) ಅರ್ಧ ಶತಕ ಸಿಡಿಸಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದಿರುವ ಭಾರತ ತಂಡ ಈ ಪಂದ್ಯವನ್ನೂ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.
ಶ್ರೀಲಂಕಾ ತಂಡ: ಕುಶಲ್ ಮೆಂಡಿಸ್, ಆವಿಷ್ಕಾ ಫರ್ನಾಂಡೊ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ನುವನಿದು ಫರ್ನಾಂಡೊ, ದಸುನ್ ಶಾನಕ, ವನಿಂದು ಹಸರಂಗ, ಚಮಿಕ ಕರುಣರತ್ನೆ, ದುನಿತ್ ವೆಲ್ಲಲಗೆ, ಲಾಹಿರು ಕುಮಾರ, ಕಸುನ ರಜಿತ
ಭಾರತ ತಂಡ: ರೋಹಿತ್ ಶರ್ಮಾ, ಶುಭಮನ್ ಗಿನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಕುಲೀಪ್ ಯಾದವ್, ಉಮ್ರಾನ್ ಮಲ್ಲಿಕ್, ಮೊಹಮ್ಮದ್ ಸಿರಾಜ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.