ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಸ್ಟ್‌ ಇಂಡೀಸ್‌ ಪ್ರವಾಸ: ಧವನ್‌–ಅಶ್ವಿನ್‌ ಇನ್‌, ಬೂಮ್ರಾ–ಹಾರ್ದಿಕ್‌ ಔಟ್‌

ಕ್ರಿಕೆಟ್‌
Last Updated 21 ಜುಲೈ 2019, 10:32 IST
ಅಕ್ಷರ ಗಾತ್ರ

ಮುಂಬೈ: ಮುಂದಿನ ತಿಂಗಳ ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)ನ ಎಂ.ಎಸ್‌.ಕೆ.ಪ್ರಸಾದ್‌ ನೇತೃತ್ವದ ಆಯ್ಕೆ ಸಮಿತಿ ವಿರಾಟ್‌ ಕೊಹ್ಲಿ ನೇತೃತ್ವದ ಭಾರತ ತಂಡವನ್ನು ಭಾನುವಾರ ಪ್ರಕಟಿಸಿದೆ.

ಆಗಸ್ಟ್‌ 3ರಂದು ಆರಂಭವಾಗುವ ಈ ಪ್ರವಾಸದಲ್ಲಿ ಭಾರತ ಮೂರು ಟಿ–20, ಮೂರು ಏಕದಿನ ಮತ್ತು ಎರಡು ಟೆಸ್ಟ್‌ ಪಂದ್ಯಗಳನ್ನು ಆಡಲಿದೆ.

ವಿಶ್ವಕಪ್‌ ಟೂರ್ನಿಯಲ್ಲಿ ಆಡಿದ್ದ ವೇಗಿ ಜಸ್‌ಪ್ರೀತ್‌ ಬೂಮ್ರಾಗೆ ಏಕದಿನ ಹಾಗೂ ಟ್ವಿಂಟಿ–20 ಹಾಗೂ ಆಲೌರೌಂಡರ್‌ ಹಾರ್ದಿಕ್‌ ಪಾಂಡ್ಯಗೆ ಎಲ್ಲಾಮಾದರಿಗಳಿಂದಲ್ಲೂ ವಿಶ್ರಾಂತಿ ನೀಡಲಾಗಿದೆ.

ವಿಕೆಟ್‌ ಕೀಪರ್‌ ಮಹೇಂದ್ರ ಸಿಂಗ್‌ ಧೋನಿ ಈಗಾಗಲೇ ಟೂರ್ನಿಯಿಂದ ದೂರ ಉಳಿಯುವುದಾಗಿ ತಿಳಿಸಿದ್ದು, ಅವರ ಬದಲಿಗೆ ರಿಷಭ್‌ ಪಂತ್‌ಗೆ ಅವಕಾಶ ನೀಡಲಾಗಿದೆ.

ಟೆಸ್ಟ್‌: ವಿರಾಟ್‌ ಕೊಹ್ಲಿ (ನಾಯಕ), ಅಂಜಿಕ್ಯ ರಹಾನೆ (ಉಪ ನಾಯಕ), ಮಯಾಂಕ್ ಅಗರವಾಲ್, ಕೆ.ಎಲ್‌. ರಾಹುಲ್‌, ಚೇತೇಶ್ವರ್‌ ಪೂಜಾರ, ಹನುಮ ವಿಹಾರಿ, ರೋಹಿತ್‌ ಶರ್ಮಾ, ರಿಷಭ್‌ ಪಂತ್‌ (ವಿಕೆಟ್‌ ಕೀಪರ್‌), ವೃದ್ಧಿಮಾನ್‌ ಸಹಾ, ಆರ್‌.ಅಶ್ವಿನ್‌, ರವೀಂದ್ರ ಜಡೇಜ, ಕುಲದೀಪ್‌ ಜಾದವ್‌, ಇಶಾಂತ್‌ ಶರ್ಮಾ, ಮೊಹಮ್ಮದ್‌ ಶಮಿ, ಜಸ್‌ಪ್ರೀತ್‌ ಬೂಮ್ರಾ, ಉಮೇಶ್‌ ಯಾಧವ್‌

ಏಕದಿನ: ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮಾ (ಉಪ ನಾಯಕ), ಶಿಖರ್‌ ಧವನ್‌, ಕೆ.ಎಲ್‌.ರಾಹುಲ್‌, ಶ್ರೇಯಸ್‌ ಐಯ್ಯರ್‌, ಮನೀಷ್‌ ಪಾಂಡೆ, ರಿಷಭ್ ಪಂತ್ (ವಿಕೆಟ್‌ ಕೀಪರ್‌), ರವೀಂದ್ರ ಜಡೇಜ, ಕುಲದೀಪ್‌ ಯಾದವ್‌, ಯಜುವೇಂದ್ರ ಚಾಹಲ್‌, ಕೇದಾರ್‌ ಜಾಧವ್‌, ಮೊಹಮ್ಮದ್‌ ಶಮಿ, ಭುವನೇಶ್ವರ್‌ ಕುಮಾರ್‌, ಖಲೀಲ್‌ ಅಹ್ಮದ್‌, ನವದೀಪ್‌ ಸೈನಿ

ಟ್ವಿಂಟಿ-20: ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮಾ (ಉಪ ನಾಯಕ), ಶಿಖರ್‌ ಧವನ್‌, ಕೆ.ಎಲ್‌.ರಾಹುಲ್‌, ಶ್ರೇಯಸ್‌ ಐಯ್ಯರ್‌, ರಿಷಭ್‌ ಪಂತ್‌ (ವಿಕೆಟ್‌ ಕೀಪರ್‌), ಕೃಣಾಲ್‌ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್‌ ಸುಂದರ್‌, ರಾಹುಲ್‌ ಚಾಹರ್‌, ಭುವನೇಶ್ವರ್‌ ಕುಮಾರ್‌, ಖಲೀಲ್‌ ಅಹ್ಮದ್‌, ದೀಪಕ್‌ ಚಾಹರ್‌, ನವದೀಪ್‌ ಸೈನಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT