ಅಹಮದಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲೇ ಭಾರತೀಯ ಬೌಲರ್ಗಳು ಮೇಲುಗೈ ಸಾಧಿಸಿದ್ದು, ವೆಸ್ಟ್ ಇಂಡೀಸ್ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 162 ರನ್ಗಳಿಗೆ ಸರ್ವಪತನ ಕಂಡಿದೆ.

ಭಾರತ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ ಮೊಹಮ್ಮದ್ ಸಿರಾಜ್ 4 ವಿಕೆಟ್ ಪಡೆದು ಮಿಂಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ಜಸ್ಪ್ರೀತ್ ಬುಮ್ರಾ 3, ಕುಲದೀಪ್ ಯಾದವ್ 2 ಹಾಗೂ ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದು ಮಿಂಚಿದರು.

ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ದಿನದ ಮೊದಲ ಅವಧಿಯಲ್ಲೇ ವಿಂಡೀಸ್ ಬ್ಯಾಟರ್ಗಳನ್ನು ಭಾರತೀಯ ಬೌಲರ್ಗಳು ಕಟ್ಟಿ ಹಾಕಿದರು.

ವಿಂಡೀಸ್ ಆರಂಭಿಕರು ನಿರಾಸೆ ಮೂಡಿಸಿದರು. ಜಾನ್ ಕ್ಯಾಂಪ್ಬೆಲ್ ಎಂಟು ಹಾಗೂ ತೇಜ್ನಾರಾಯಣ್ ಚಂದ್ರಪಾಲ್ ಶೂನ್ಯಕ್ಕೆ ಔಟ್ ಆದರು. ಅಲಿಕ್ ಅಥಾಂಜೆ 12 ಹಾಗೂ ಶಾಯಿ ಹೋಪ್ 26 ರನ್ ಗಳಿಸಿ ಪೆವಿಲಿನ್ಗೆ ಮರಳಿದರು.

ನಂತರ, ನಾಯಕ ರೋಸ್ಟನ್ ಚೇಸ್ 24 ಹಾಗೂ ಜಸ್ಟಿನ್ ಗ್ರೀವ್ಸ್ 32 ರನ್ ಗಳಿಸಿ ಕೊಂಚ ಹೋರಾಟ ನೀಡಿದರು. ಅಂತಿಮವಾಗಿ ವೆಸ್ಟ್ ಇಂಡಿಸ್ 44.1 ಓವರ್ಗಳಲ್ಲಿ 162 ರನ್ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು.

ಟಾಸ್ ಗೆದ್ದ ವಿಂಡೀಸ್ ಬ್ಯಾಟಿಂಗ್ ಆಯ್ಕೆ...

ಈ ಮೊದಲು ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ರೋಸ್ಟನ್ ಚೇಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ.

ಇಂಗ್ಲೆಂಡ್ ಪ್ರವಾಸದಲ್ಲಿ ಅಮೋಘ ಪ್ರದರ್ಶನದ ಬಳಿಕ ತವರಿನಲ್ಲಿ ವಿಂಡೀಸ್ ಸವಾಲು ಭಾರತಕ್ಕೆ ಎದುರಾಗಿದೆ.

ಈಗಾಗಲೇ ನಾಯಕತ್ವ ಜೊತೆಗೆ ಬ್ಯಾಟಿಂಗ್ನಲ್ಲೂ ಸೈ ಎನಿಸಿರುವ ಶುಭಮನ್ ಗಿಲ್, ವಿಂಡೀಸ್ ವಿರುದ್ಧದ ಸರಣಿಯಲ್ಲಿ ಗೆಲುವಿನ ಆತ್ಮವಿಶ್ವಾಸದಲ್ಲಿದ್ದಾರೆ.

ಯಶಸ್ವಿ ಜೈಸ್ವಾಲ್ ಹಾಗೂ ಕೆ.ಎಲ್. ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ನಾಯಕ ಗಿಲ್ ಜೊತೆಗೆ ಸಾಯಿ ಸುದರ್ಶನ್, ಧ್ರುವ್ ಜುರೇಲ್ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಲಿದ್ದಾರೆ.

ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್ ಹಾಗೂ ನಿತೀಶ್ ರೆಡ್ಡಿ ತಂಡದಲ್ಲಿರುವ ಆಲ್ರೌಂಡರ್ ಆಟಗಾರರಾಗಿದ್ದಾರೆ.

ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಏಷ್ಯಾ ಕಪ್ನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಕುಲದೀಪ್ ಯಾದವ್ ಸಹ ತಂಡದಲ್ಲಿದ್ದಾರೆ.

ವಿಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವು ಅಕ್ಟೋಬರ್ 10ರಿಂದ ದೆಹಲಿಯಲ್ಲಿ ನಡೆಯಲಿದೆ.

ವಿಂಡೀಸ್ ವಿರುದ್ಧ ಅಮೋಘ ಸಾಧನೆ...

2002ರಿಂದ ವಿಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ಅಜೇಯ ಓಟವನ್ನು ಮುಂದುವರಿಸಿದೆ. ಈ ಅವಧಿಯಲ್ಲಿ 25 ಟೆಸ್ಟ್ ಪಂದ್ಯಗಳಲ್ಲಿ ಜಯ ಗಳಿಸಿದೆ. ಪ್ರಸ್ತುತ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ಜಯದ ಓಟ ಮುಂದುವರಿಸುವ ಇರಾದೆಯಲ್ಲಿದೆ.

ಟಾಸ್ ವೇಳೆ ಮಾತನಾಡಿದ ಗಿಲ್, ಪ್ರಸಕ್ತ ವರ್ಷದಲ್ಲಿ ತವರಿನಲ್ಲಿ ನಾಲ್ಕು ಪಂದ್ಯಗಳನ್ನುಆಡಲಿದ್ದೇವೆ. ಈ ಎಲ್ಲ ಪಂದ್ಯಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ. ನಾವು ಅತ್ಯುತ್ತಮ ತಯಾರಿಯನ್ನೇ ನಡೆಸಿದ್ದೇವೆ. ಎಲ್ಲರೂ ಉತ್ತಮ ಲಯದಲ್ಲಿದ್ದಾರೆ. ಪಿಚ್ ಉತ್ತಮವಾಗಿ ಕಾಣಿಸುತ್ತಿದೆ. ಹಾಗಾಗಿ ಟಾಸ್ ಸೋತಿರುವ ಬಗ್ಗೆ ಬೇಸರ ಮೂಡಿಸಿಲ್ಲ ಎಂದಿದ್ದಾರೆ.
.Asia Cup | ಟ್ರೋಫಿ ಕೊಂಡೊಯ್ದ ವಿವಾದ: ಎಸಿಸಿ ಸಭೆಯಲ್ಲಿ ಭಾರತ ತೀವ್ರ ಆಕ್ಷೇಪ.IND vs WI | ತವರಿನಲ್ಲಿ ಶುಭಮನ್ ಗಿಲ್ ನಾಯಕತ್ವಕ್ಕೆ ಮೊದಲ ‘ಟೆಸ್ಟ್’.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.