ಅಹಮದಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಉತ್ತಮ ಸ್ಥಿತಿಯಲ್ಲಿದೆ.

ಕನ್ನಡಿಗ, ಆರಂಭಿಕ ಬ್ಯಾಟರ್ ಕೆ.ಎಲ್. ರಾಹುಲ್ ಅಮೋಘ ಶತಕದ (100*) ನೆರವಿನಿಂದ ಎರಡನೇ ದಿನದಾಟದ ಊಟದ ವಿರಾಮದ ಹೊತ್ತಿಗೆ 67 ಓವರ್ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿದೆ.

ಆ ಮೂಲಕ 56 ರನ್ಗಳ ಮುನ್ನಡೆ ಗಳಿಸಿದೆ.

ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವಿಂಡೀಸ್ನ 162 ರನ್ಗಳಿಗೆ ಪ್ರತಿಯಾಗಿ ಭಾರತ ದಿಟ್ಟ ಉತ್ತರ ನೀಡುತ್ತಿದೆ.

ಮೊದಲ ದಿನದಂತ್ಯಕ್ಕೆ ಭಾರತ ಎರಡು ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತ್ತು. ಇಂದು (ಶುಕ್ರವಾರ) ಮೊದಲನೇ ಅವಧಿಯಲ್ಲಿ ನಾಯಕ ಶುಭಮನ್ ಗಿಲ್ ಹಾಗೂ ಕೆ.ಎಲ್. ರಾಹುಲ್ 98 ರನ್ಗಳ ಜೊತೆಯಾಟದಲ್ಲಿ ಭಾಗಿಯಾಗುವ ಮೂಲಕ ಭದ್ರ ಅಡಿಪಾಯ ಹಾಕಿಕೊಟ್ಟರು.

ರಾಹುಲ್ ಟೆಸ್ಟ್ ಕ್ರಿಕೆಟ್ನಲ್ಲಿ 11ನೇ ಶತಕದ ಸಾಧನೆ ಮಾಡಿದ್ದಾರೆ. 192 ಎಸೆತಗಳಲ್ಲಿ ಅಜೇಯ 100 ರನ್ ಗಳಿಸಿದ್ದು, ಕ್ರೀಸಿನಲ್ಲಿದ್ದಾರೆ. ಅವರಿಗೆ ವಿಕೆಟ್ ಕೀಪರ್, ಬ್ಯಾಟರ್ ಧ್ರುವ್ ಜುರೇಲ್ ಸಾಥ್ ನೀಡುತ್ತಿದ್ದಾರೆ.

ನಾಯಕ ಗಿಲ್ 100 ಎಸೆತಗಳಲ್ಲಿ ಅರ್ಧಶತಕದ ಸಾಧನೆ ಮಾಡಿದರು. ವಿಂಡೀಸ್ ಪರ ನಾಯಕ ರೋಸ್ಟನ್ ಚೇಸ್ ಎರಡು ವಿಕೆಟ್ ಗಳಿಸಿದರು.

ಮೊದಲ ದಿನದಾಟದಲ್ಲಿ ಮೊಹಮ್ಮದ್ ಸಿರಾಜ್ (40ಕ್ಕೆ 4) ಹಾಗೂ ಜಸ್ಪ್ರೀತ್ ಬೂಮ್ರಾ (42ಕ್ಕೆ 3) ದಾಳಿಗೆ ಸಿಲುಕಿದ ವಿಂಡೀಸ್ 162 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು.
.ICC Womens WC: 'ಆಜಾದ್ ಕಾಶ್ಮೀರ' ಉಲ್ಲೇಖ ಮಾಡಿದ ಪಾಕ್ ಮಾಜಿ ನಾಯಕಿ, ಆಕ್ರೋಶ.ಅಹಮದಾಬಾದ್ ಟೆಸ್ಟ್: ಸಿರಾಜ್ –ಬೂಮ್ರಾ ‘ಜೊತೆಯಾಟ’ಕ್ಕೆ ಕುಸಿದ ವಿಂಡೀಸ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.