ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs WI ODI | ಶ್ರೇಯಸ್- ಪಂತ್ ಉತ್ತಮ ಬ್ಯಾಟಿಂಗ್, ವಿಂಡೀಸ್‌ಗೆ 266 ರನ್ ಗುರಿ

Last Updated 11 ಫೆಬ್ರುವರಿ 2022, 12:21 IST
ಅಕ್ಷರ ಗಾತ್ರ

ಅಹಮದಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಸಾಧಾರಣ ಮೊತ್ತ ಪೇರಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಆರಂಭಿಕ ಆಘಾತ ಎದುರಿಸಿತ್ತು. 50 ಓವರ್‌ಗಳಲ್ಲಿ 265 ರನ್ ಗಳಿಸಿ ಆಲೌಟ್ ಆಗಿದೆ.

ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ 13, ವಿರಾಟ್ ಕೊಹ್ಲಿ 00, ಶಿಖರ್ ಧವನ್ 10 ರನ್ ಗಳಿಸಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಶ್ರೇಯಸ್ ಅಯ್ಯರ್ (80), ರಿಷಭ್ ಪಂತ್ (56) ಅರ್ಧಶತಕ ಗಳಿಸಿ ಮಿಂಚಿದರು. ಇತ್ತ ದೀಪಕ್ ಚಾಹರ್ 38, ವಾಷಿಂಗ್ಟನ್ ಸುಂದರ್ 33 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು.

ವೆಸ್ಟ್‌ ಇಂಡೀಸ್ ಪರ ಜೇಸನ್ ಹೋಲ್ಡರ್‌ 4, ಅಲ್ಜಾರಿ ಜೋಸೆಫ್ 2, ಹೇಡನ್ ವಾಲ್ಶ್ 2, ಒಡಿಯನ್ ಸ್ಮಿತ್, ಫ್ಯಾಬಿಯನ್ ಅಲೆನ್ ತಲಾ ಒಂದು ವಿಕೆಟ್ ಪಡೆದರು.

ಭಾರತ ತಂಡದಲ್ಲಿ ನಾಲ್ಕು ಬದಲಾವಣೆ: ಇಂದಿನ ಪಂದ್ಯದಲ್ಲಿ ಕೆ.ಎಲ್. ರಾಹುಲ್, ದೀಪಕ್ ಹೂಡಾ ಹಾಗೂ ಯಜುವೇಂದ್ರ ಚಾಹಲ್‌ ಹಾಗೂ ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ಅವರ ಸ್ಥಾನಗಳಲ್ಲಿ ಶಿಖರ್ ಧವನ್, ಶ್ರೇಯಸ್ ಅಯ್ಯರ್, ದೀಪಕ್ ಚಾಹರ್ ಮತ್ತು ಕುಲ್‌ದೀಪ್ ಯಾದವ್ ಅವರನ್ನು ಸೇರ್ಪಡೆಗೊಳಿಸಲಾಗಿದೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ 2-0 ಅಂತರದ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಅಂತಿಮ ಪಂದ್ಯವನ್ನು ಗೆದ್ದು ಸರಣಿ ಕ್ಲೀನ್‌ಸ್ವೀಪ್‌ ಮಾಡಿಕೊಳ್ಳುವ ಇರಾದೆಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT