ಭಾನುವಾರ, ಜನವರಿ 26, 2020
28 °C

IND vs WI ಏಕದಿನ ಕ್ರಿಕೆಟ್: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಕಟಕ್: ವೆಸ್ಟ್ ಇಂಡೀಸ್ ವಿರುದ್ಧ ಭಾನುವಾರ ನಡೆಯುತ್ತಿರುವ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.

ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮತ್ತು ಎರಡನೇ ಪಂದ್ಯದಲ್ಲಿ ಭಾರತ ಜಯಗಳಿಸಿರುವುದರಿಂದ ಸರಣಿ ಗೆಲ್ಲುವ ನಿಟ್ಟಿನಲ್ಲಿ ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದೆ. ವೆಸ್ಟ್ ಇಂಡೀಸ್ ವಿರುದ್ಧ ಸತತ ಹತ್ತನೇ ಏಕದಿನ ಸರಣಿ ಗೆದ್ದ ಸಾಧನೆ ದಾಖಲಿಸಲು ಭಾರತ ತಂಡವು ಈ ಪಂದ್ಯವನ್ನು ಗೆಲ್ಲಲೇಬೇಕಿದೆ.

ಸರಣಿಯ ಎರಡನೇ ಪಂದ್ಯದಲ್ಲಿ ಅಬ್ಬರದ ಶತಕ ಸಿಡಿಸಿದ್ದ ಕೆ.ಎಲ್‌. ರಾಹುಲ್, ರೋಹಿತ್ ಶರ್ಮಾ ಮತ್ತು ಅರ್ಧಶತಕ ಸಿಡಿಸಿದ್ದ ಶ್ರೇಯಸ್, ರಿಷಭ್ ಪಂತ್ ಮೇಲೆ ಕ್ರಿಕೆಟ್‌ ಅಭಿಮಾನಿಗಳ ದೃಷ್ಟಿ ನೆಟ್ಟಿದೆ. ಕಳೆದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರೂ ನಾಯಕ ವಿರಾಟ್ ಕೊಹ್ಲಿ ಮೇಲೆಯೂ ಹೆಚ್ಚಿನ ನಿರೀಕ್ಷೆ ಇದೆ.

ವೆಸ್ಟ್ ಇಂಡೀಸ್ ಪರ ಶಾಯ್ ಹೋಪ್ ಮತ್ತು ಎವಿನ್ ಲೂಯಿಸ್ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು