ದೆಹಲಿ: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾದನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ಅವಧಿಯ ಮುಕ್ತಾಯಕ್ಕೆ ಭಾರತ 220 ರನ್ಗಳಿಗೆ 1 ವಿಕೆಟ್ ಕಳೆದುಕೊಂಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಆರಂಭಿಕರಾದ ಕೆ.ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ 58 ರನ್ಗಳ ಮೊದಲ ವಿಕೆಟ್ ಜೊತೆಯಾಟ ಆಡಿದರು. ಈ ಹಂತದಲ್ಲಿ 38 ರನ್ ಗಳಿಸಿದ್ದ ರಾಹುಲ್ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಬಳಿಕ ಜೊತೆಯಾದ ಸಾಯಿ ಸುದರ್ಶನ್ ಹಾಗೂ ಯಶಸ್ವಿ ಜೈಸ್ವಾಲ್ ಅಮೋಘ ಜೊತೆಯಾಟ ಆಡಿದರು.

ಸದ್ಯ, ಚಹಾ ವಿರಾಮದ ವೇಳೆಗೆ ಯಶಸ್ವಿ ಜೈಸ್ವಾಲ್ (111*), ಹಾಗೂ ಸಾಯಿ ಸುದರ್ಶನ್ (70*) ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ. ವಿಂಡೀಸ್ ಪರ ಜೋಮೆಲ್ ವಾರಿಕನ್ ಮೊದಲ 1 ವಿಕೆಟ್ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.