ಕೋಲ್ಕತ್ತ: ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ–20 ಕ್ರಿಕೆಟ್ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ.

ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆದರಂತೆ ಮೊದಲುಬ್ಯಾಟಿಂಗ್ ಮಾಡಿದ ಭಾರತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು.

ಭಾರತದ ಆರಂಭಿಕ ಆಟಗಾರ ಇಶಾನ್ ಕಿಶನ್ (2), ರೋಹಿತ್ ಶರ್ಮಾ (19) ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತ ಎದುರಿಸಿತು. ಬಳಿಕ ಕ್ರೀಸ್ಗೆ ಬಂದ ವಿರಾಟ್ ಕೊಹ್ಲಿ (52), ರಿಷಭ್ ಪಂತ್ಔಟಾಗದೆ (52) ಹಾಗೂ ವೆಂಕಟೇಶ್ ಅಯ್ಯರ್ (33) ರನ್ ಗಳಿಸಿ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.

ವೆಸ್ಟ್ ಇಂಡೀಸ್ ಪರ ರೋಸ್ಟನ್ ಚೇಸ್ 3, ರೊಮಾರಿಯೊ ಶೆಫರ್ಡ್ ಹಾಗೂ ಶೆಲ್ಡನ್ ಕಾಟ್ರೆಲ್ ತಲಾ ಒಂದು ವಿಕೆಟ್ ಪಡೆದರು .

ಸದ್ಯ ಬ್ಯಾಟಿಂಗ್ ಆರಂಭಿಸಿರುವ ವೆಸ್ಟ್ ಇಂಡೀಸ್ 8ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 59ರನ್ ಗಳಿಸಿದೆ.

ವಿಂಡೀಸ್ನ ಆರಂಭಿಕ ಆಟಗಾರ ಕೈಲ್ ಮೆಯರ್ಸ್ (9) ಅವರನ್ನು ದೀಪಕ್ ಚಾಹರ್ ಔಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.