ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದಾರ್ಪಣೆ ಪಂದ್ಯದಲ್ಲೇ ಅರ್ಧಶತಕ ಸಿಡಿಸಿದ ಪೃಥ್ವಿ ಶಾ

ಭಾರತ–ವೆಸ್ಟ್ ಇಂಡೀಸ್ ಟೆಸ್ಟ್‌ ಕ್ರಿಕೆಟ್‌
Last Updated 4 ಅಕ್ಟೋಬರ್ 2018, 6:11 IST
ಅಕ್ಷರ ಗಾತ್ರ

ರಾಜ್‌ಕೋಟ್: ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ ಮೂಲಕ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಮುಂಬೈನ ಪೃಥ್ವಿ ಶಾ ಅರ್ಧಶತಕ ಸಿಡಿಸಿ ಮಿಂಚಿದರು.

ಇಲ್ಲಿನ ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ (ಎಸ್‌ಸಿಎ) ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಪಂದ್ಯದಲ್ಲಿಟಾಸ್‌ ಗೆದ್ದ ಭಾರತ, ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು.

ಪೃಥ್ವಿ ಅವರೊಂದಿಗೆ ಇನಿಂಗ್ಸ್‌ ಆರಂಭಿಸಿದ ಕೆ.ಎಲ್. ರಾಹುಲ್(0), ಶಾನನ್ ಗ್ಯಾಬ್ರಿಯಲ್ ಎಸೆದ ಮೊದಲ ಓವರ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು. ಬಳಿಕ ಚೇತೇಶ್ವರ್‌ ಪೂಜಾರ ಜೊತೆಗೂಡಿ ತಾಳ್ಮೆಯ ಆಟವಾಡಿದ ಪೃಥ್ವಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು.

ಈ ಮೂಲಕ ಭಾರತದ ಪರ ಕಿರಿಯ ವಯಸ್ಸಿಗೆ ಅರ್ಧಶತಕ ಗಳಿಸಿದ ಮೂರನೇ ಆಟಗಾರ ಎನಿಸಿದರು. ಈ ಹಿಂದೆ ಸಚಿನ್‌ ತೆಂಡೂಲ್ಕರ್‌, ಪಾರ್ಥವ್‌ ಪಟೇಲ್‌ ಈ ಸಾಧನೆ ಮಾಡಿದ್ದರು.

ಸದ್ಯ ಬ್ಯಾಟಿಂಗ್‌ ಮುಂದುವರಿಸಿರುವ ಭಾರತ 25ಓವರ್‌ಗಳಲ್ಲಿ ಒಂದು ವಿಕೆಟ್‌ ಕಳೆದುಕೊಂಡು 133ರನ್‌ ಗಳಿಸಿದೆ (ಚೇತೇಶ್ವರ್‌ ಪೂಜಾರ 56*), ಪೃಥ್ವಿ ಶಾ (75*).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT