ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌ | ಭಾರತ ಮಹಿಳಾ ತಂಡದ ಬ್ಯಾಟರ್‌ ವನಿತಾ ವಿದಾಯ

Last Updated 22 ಫೆಬ್ರುವರಿ 2022, 4:21 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಮಹಿಳಾ ತಂಡದ ಬ್ಯಾಟರ್‌ವಿ.ಆರ್‌. ವನಿತಾ ಅವರು ಸೋಮವಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

31 ವರ್ಷದ ವನಿತಾ ಅವರು 2014–2016ರ ಅವಧಿಯಲ್ಲಿ ಆರು ಏಕದಿನ ಮತ್ತು 16 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ದೇಶಿ ಟೂರ್ನಿಗಳಲ್ಲಿ ಕರ್ನಾಟಕ ಮತ್ತು ಬಂಗಾಳ ರಾಜ್ಯ ತಂಡಗಳ ಪರವೂ ಅವರು ಆಡಿದ್ದರು.

ಟ್ವಿಟರ್‌ ಮೂಲಕ ಅವರು ನಿವೃತ್ತಿ ಪ್ರಕಟಿಸಿದ್ದು, ತಂಡದ ಸಹ ಆಟಗಾರ್ತಿಯರಾದ ಜೂಲನ್ ಗೋಸ್ವಾಮಿ ಮತ್ತು ಮಿಥಾಲಿ ರಾಜ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 2014ರ ಜನವರಿಯಲ್ಲಿ ಶ್ರೀಲಂಕಾ ಎದುರಿನ ಏಕದಿನ ಪಂದ್ಯದ ಮೂಲಕ ಅವರು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಏಕದಿನ ಪಂದ್ಯಗಳಲ್ಲಿ 85 ಮತ್ತು ಟಿ20ಯಲ್ಲಿ 216 ರನ್‌ಗಳನ್ನು ಕಲೆಹಾಕಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT