ಪರ್ತ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಮಹಿಳಾ ತಂಡಕ್ಕೆ ಹಿನ್ನಡೆಯಾಗಿದೆ. ಕಾರ್ಯಭಾರ ಒತ್ತಡದ ಭಾಗವಾಗಿ ವೇಗದ ಬೌಲರ್ ರೇಣುಕಾ ಸಿಂಗ್ ಅವರು ಆತಿಥೇಯ ತಂಡದ ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾ ಎದುರಿನ ಹಗಲು–ರಾತ್ರಿ ಟೆಸ್ಟ್ ಪಂದ್ಯ ಶುಕ್ರವಾರ ಇಲ್ಲಿನ ‘ವಾಕಾ’ (ಪಶ್ಚಿಮ ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆಯ) ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.

‘ರೇಣುಕಾ ಸ್ಥಾನದಲ್ಲಿ ಕಶ್ವಿ ಗೌತಮ್ ಅವರು ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಬಹು ಮಾದರಿಯ ಸರಣಿಯಲ್ಲಿ ಕಶ್ವಿ ಏಕದಿನ ಸರಣಿಯಲ್ಲಿ ತಂಡಕ್ಕೆ ಆಡಿದ್ದರು. ಭಾರತ ಟಿ20 ಸರಣಿಯನ್ನು 2–1 ರಿಂದ ಜಯಿಸಿತ್ತು. ಆದರೆ ಭಾನುವಾರ ಮುಕ್ತಾಯಗೊಂಡ ಏಕದಿನ ಸರಣಿಯನ್ನು ಆತಿಥೇಯ 3–0 ಯಿಂದ ಗುಡಿಸಿಹಾಕಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.