ಮುಂಬೈ: ಇಲ್ಲಿನ ವಾಂಖೆಡೆ ಮೈದಾನದಲ್ಲಿ ಭಾರತೀಯ ವನಿತೆಯರ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಆಸ್ಟ್ರೇಲಿಯಾ ಆರಂಭಿಕ ಆಘಾತಕ್ಕೊಳಗಾಗಿದ್ದು, ತಾಜಾ ವರದಿಯ ವೇಳೆಗೆ ಮೂರು ಓವರ್‌ಗಳಲ್ಲಿ ಒಂಬತ್ತು ರನ್ನಿಗೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿದೆ.

ಈಚೆಗೆ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಜಯ ಸಾಧಿಸಿದ್ದ ಭಾರತ ತಂಡವು ಆತ್ಮವಿಶ್ವಾಸದಲ್ಲಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಸೇರಿದಂತೆ ತಂಡದೆಲ್ಲ ಆಟಗಾರ್ತಿಯರು ಉತ್ತಮ ಲಯದಲ್ಲಿದ್ದಾರೆ. ಆದರೆ ಗಾಯಾಳು ಕನ್ನಡತಿ ಶುಭಾ ಸತೀಶ್ ಅಲಭ್ಯರಾಗಿದ್ದಾರೆ.
.ಟೆಸ್ಟ್ ಕ್ರಿಕೆಟ್ | ಭಾರತ ಮಹಿಳೆಯರ ಚಾರಿತ್ರಿಕ ಜಯ.INDW vs ENGW: ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಗಳಿಸಿದ ಕನ್ನಡತಿ ಶುಭಾ ಸತೀಶ್.
ಮತ್ತೊಂದೆಡೆ ರಿಚಾ ಘೋಷ್ ಚೊಚ್ಚಲ ಟೆಸ್ಟ್ ಕ್ಯಾಪ್ ಪಡೆದಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು, ಕಳೆದ 46 ವರ್ಷಗಳಲ್ಲಿ ಹತ್ತು ಬಾರಿ ಮುಖಾಮುಖಿಯಾಗಿವೆ. ಆಸ್ಟ್ರೇಲಿಯಾ ನಾಲ್ಕು ಬಾರಿ ಜಯಿಸಿದೆ. 6 ಪಂದ್ಯಗಳು ಡ್ರಾ ಆಗಿವೆ.

40 ವರ್ಷಗಳ ಹಿಂದೆ ಆಸ್ಟ್ರೇಲಿಯಾ ಮಹಿಳಾ ತಂಡವು ಕೊನೆಯ ಬಾರಿಗೆ ಭಾರತದಲ್ಲಿ ಟೆಸ್ಟ್ ಆಡಿತ್ತು. ಇದೇ ವಾಂಖೆಡೆಯಲ್ಲಿ ಆ ಪಂದ್ಯ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.