ಮುಂಬೈ: ಇಂಗ್ಲೆಂಡ್ ಮತ್ತು ವೇಲ್ಸ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಮಹಿಳಾ ಕ್ರಿಕೆಟ್ ಟೂರ್ನಿಯಲ್ಲಿ ಆಡಲಿರುವ ಭಾರತ ಮಹಿಳಾ ತಂಡದಲ್ಲಿ ಕರ್ನಾಟಕದ ಸ್ಪಿನ್–ಆಲ್ರೌಂಡರ್ ಶ್ರೇಯಾಂಕಾ ಪಾಟೀಲ ಸ್ಥಾನ ಪಡೆದಿದ್ದಾರೆ.

ಶನಿವಾರ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರ್ತಿಯರ ತಂಡವನ್ನು ಆಯ್ಕೆ ಮಾಡಲಾಯಿತು. ಜೂನ್ 12ರಿಂದ ಟೂರ್ನಿ ಆರಂಭವಾಗಲಿದೆ. ಜುಲೈ 10ರಿಂದ 13ರವರೆಗೆ ಇಂಗ್ಲೆಂಡ್ ಎದುರಿಗೆ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೂ ತಂಡವನ್ನು ಆಯ್ಕೆ ಮಾಡಲಾಯಿತು.

ಉಭಯ ತಂಡಗಳಿಗೂ ಹರ್ಮನ್ಪ್ರೀತ್ ಕೌರ್ ಮತ್ತು ಸ್ಮೃತಿ ಮಂದಾನ ಅವರು ಕ್ರಮವಾಗಿ ನಾಯಕಿ ಮತ್ತು ಉಪನಾಯಕಿಯಾಗಿದ್ದಾರೆ. ಪ್ರತೀಕಾ ರಾವಲ್ ಹಾಗೂ ಆಲ್ರೌಂಡರ್ ಅಮನ್ಜೋತ್ ಕೌರ್ ಟಿ20 ತಂಡಕ್ಕೆ ಆಯ್ಕೆಯಾಗಿಲ್ಲ. ಯಷ್ಟಿಕಾ ಭಾಟಿಯಾ ಹಾಗೂ ಇನ್ನೂ ಒಂದೂ ಅಂತರರಾಷ್ಟ್ರೀಯ ಪಂದ್ಯದಲ್ಲಿ ಆಡದಿರುವ ನಂದಿನಿ ಶರ್ಮಾ ಅವರಿಗೆ ಸ್ಥಾನ ನೀಡಲಾಗಿದೆ. ಮಧ್ಯಮವೇಗದ ಬೌಲರ್ ನಂದಿನಿ ಅವರು ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸಿದ್ದರು. 10 ಪಂದ್ಯಗಳಲ್ಲಿ ಆಡಿ 17 ವಿಕೆಟ್ ಗಳಿಸಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ಬ್ಯಾಂಕಾಕ್ನಲ್ಲಿ ನಡೆದಿದ್ದ ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು.

ಪ್ರತೀಕಾ ಅವರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ಸಿಕ್ಕಿದೆ. ಸಯಾಲಿ ಸಾತ್ಘರೆ ಮತ್ತು ಸ್ನೇಹ ರಾಣಾ ತಂಡದಲ್ಲಿದ್ದಾರೆ.

ಟಿ20 ವಿಶ್ವಕಪ್ ತಂಡ

ಹರ್ಮನ್ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ಜಿಮಿಮಾ ರಾಡ್ರಿಗಸ್, ಭಾರತಿ ಫೂಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ಕೀಪರ್), ಶ್ರೀಚರಣಿ, ಯಷ್ಟಿಕಾ ಭಾಟಿಯಾ (ವಿಕೆಟ್ಕೀಪರ್), ನಂದಿನಿ ಶರ್ಮಾ, ಅರುಂಧತಿ ರೆಡ್ಡಿ, ರೇಣುಕಾ ಠಾಕೂರ್, ಕ್ರಾಂತಿ ಗೌಡ್, ಶ್ರೇಯಾಂಕಾ ಪಾಟೀಲ, ರಾಧಾ ಯಾದವ್.

ಏಕೈಕ ಟೆಸ್ಟ್ಗೆ ತಂಡ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಪ್ರತೀಕಾ ರಾವಲ್, ಸಯಾಲಿ ಸಾತ್ಘರೆ, ಸ್ನೇಹ ರಾಣಾ, ಶಫಾಲಿ ವರ್ಮಾ, ಜಿಮಿಮಾ ರಾಡ್ರಿಗಸ್, ರಿಚಾ ಘೋಷ್, ಶ್ರೀಚರಣಿ, ಯಷ್ಟಿಕಾ ಭಾಟಿಯಾ, ನಂದಿನಿ ಶರ್ಮಾ, ಹರ್ಲಿನ್ ಡಿಯೊಲ್, ರೇಣುಕಾ ಸಿಂಗ್, ಕ್ರಾಂತಿ ಗೌಡ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.