ನವದೆಹಲಿ: ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ 2026ರಲ್ಲಿ ನಡೆಯಲಿರುವ ಟಿ–20 ವಿಶ್ವಕಪ್ಗೆ ಟೀಂ ಇಂಡಿಯಾವು 15 ಆಟಗಾರರ ತಂಡವನ್ನು ಪ್ರಕಟಿಸಿದೆ.

ಸೂರ್ಯಕುಮಾರ್ ಯಾದವ್ ಅವರು ನಾಯಕರಾಗಿ ಮುಂದುವರಿದಿದ್ದು, ಫಾರ್ಮ್ ಕಳೆದುಕೊಂಡಿರುವ ಶುಭಮನ್ ಗಿಲ್ ಜಾಗದಲ್ಲಿ ಅಕ್ಷರ್ ಪಟೇಲ್ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ವಿಶ್ವಕಪ್ಗೆ ಆಯ್ಕೆಯಾದ 15 ಆಟಗಾರರು

ಸೂರ್ಯಕುಮಾರ್ ಯಾದವ್: ಭಾರತ ಚುಟುಕು ಕ್ರಿಕೆಟ್ ತಂಡದ ನಾಯಕರಾಗಿರುವ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ ತಂಡವು ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ, ಅವರ ಬ್ಯಾಟ್ನಿಂದ ರನ್ಗಳು ಬರುತ್ತಿಲ್ಲ. ಕಳೆದ 14 ತಿಂಗಳಿಂದ ಟಿ20 ಕ್ರಿಕೆಟ್ನಲ್ಲಿ ಅರ್ಧಶತಕ ಗಳಿಸುವಲ್ಲಿ ವಿಫಲರಾಗಿದ್ದಾರೆ. ಭಾರತವು ವಿಶ್ವಕಪ್ನಲ್ಲಿ ಉತ್ತಮ ಪ್ರದರ್ಶನ ನೀಡಬೇಕಾದರೆ, ಸೂರ್ಯಕುಮಾರ್ ಅವರು ನಾಯಕನ ಆಟವಾಡಬೇಕಿದೆ.

ಅಭಿಷೇಕ್ ಶರ್ಮಾ: ಟೀಂ ಇಂಡಿಯಾ ಪರ ಆರಂಭಿಕ ಆಟಗಾರನಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಅಭಿಷೇಕ್ ಶರ್ಮಾ ಅವರು ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. 200ಕ್ಕೂ ಅಧಿಕ ಸ್ಟ್ರೈಕ್ರೇಟ್ನಲ್ಲಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿರುವ ಅಭಿಷೇಕ್, ಟಿ20 ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ತಿಲಕ್ ವರ್ಮಾ: ಮಧ್ಯಮ ಕ್ರಮಾಂಕದಲ್ಲಿ ಉಪಯುಕ್ತ ಆಟವಾಡುತ್ತಿರುವ ತಿಲಕ್ ವರ್ಮಾ, ಉತ್ತಮ ಲಯದಲ್ಲಿದ್ದಾರೆ. ಪಂದ್ಯದ ಗತಿಗೆ ತಕ್ಕಂತೆ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿರುವ ಅವರು, ಟಿ20 ರ್ಯಾಂಕಿಂಗ್ನಲ್ಲಿ 4ನೇ ಸ್ಥಾನದಲ್ಲಿದ್ದಾರೆ.

ಹಾರ್ದಿಕ್ ಪಾಂಡ್ಯ: ಭಾರತದ ಪರ 5 ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿರುವ ಹಾರ್ದಿಕ್ ಪಾಂಡ್ಯ, ತಂಡದಲ್ಲಿ ಅನುಭವಿ ಆಟಗಾರರಾಗಿದ್ದಾರೆ. ಟೀಂ ಇಂಡಿಯಾ ಪರ 124 ಟಿ20 ಪಂದ್ಯಗಳನ್ನು ಆಡಿರುವ ಹಾರ್ದಿಕ್, ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಉಪಯುಕ್ತ ಕೊಡುಗೆ ನೀಡಬಲ್ಲವರಾಗಿದ್ದಾರೆ.

ಶಿವಂ ದುಬೆ: ಸ್ಪೋಟಕ ಬ್ಯಾಟಿಂಗ್ ಹಾಗೂ ಬೌಲಿಂಗ್ ಮೂಲಕ ಗಮನ ಸೆಳೆದಿರುವ ಶಿವಂ ದುಬೆ, ಭಾರತದ ಸ್ಪಿನ್ ಪಿಚ್ ಹಾಗೂ ಬ್ಯಾಟಿಂಗ್ ಪಿಚ್ಗಳಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ.

ಸಂಜು ಸ್ಯಾಮ್ಸನ್: ವಿಕೆಟ್ ಕೀಪರ್ – ಬ್ಯಾಟರ್ ಆಗಿ ಗುರುತಿಸಿಕೊಂಡಿರುವ ಸಂಜು ಸ್ಯಾಮ್ಸನ್ ಅವರು ಅನುಭವಿ ಆಟಗಾರರಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಸಿಕ್ಕ ಅವಕಾಶದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 2024ರಲ್ಲಿ ಕೇವಲ 12 ಇನಿಂಗ್ಸ್ಗಳಲ್ಲಿ 436 ರನ್ ಗಳಿಸಿದ್ದರು. ಶುಭಮನ್ ಗಿಲ್ ತಂಡದಲ್ಲಿ ಉಪನಾಯಕನಾಗಿ ಸ್ಥಾನ ಪಡೆದಿದ್ದರಿಂದ, ಸ್ಯಾಮ್ಸನ್ ಅವರು ಹಲವು ಪಂದ್ಯಗಳಲ್ಲಿ ಹೊರಗುಳಿದಿದ್ದರು.

ಇಶಾನ್ ಕಿಶನ್: ಇತ್ತೀಚೆಗೆ ಮುಕ್ತಾಯವಾದ ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಆಯ್ಕೆದಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವ ಇಶಾನ್ ಕಿಶನ್, ಸ್ಪೋಟಕ ಬ್ಯಾಟಿಂಗ್ ಜತೆಗೆ ಕೀಪಿಂಗ್ ಕೂಡ ಮಾಡಬಲ್ಲರು.

ಕುಲದೀಪ್ ಯಾದವ್: ಅನುಭವಿ ಸ್ಪಿನ್ ಬೌಲರ್ ಕುಲದೀಪ್ ಯಾದವ್ ಅವರು ಭಾರತದ ಪಿಚ್ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. 2025ರ ಏಷ್ಯಾ ಕಪ್ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.

ಜಸ್ಪ್ರೀತ್ ಬೂಮ್ರಾ: ಭಾರತದ ವೇಗದ ಬೌಲಿಂಗ್ ಪಡೆಯ ಬಲವಾಗಿರುವ ಜಸ್ಪ್ರೀತ್ ಬೂಮ್ರಾ, ಅನುಭವಿ ಆಟಗಾರರಾಗಿದ್ದಾರೆ. ಪಂದ್ಯದ ಯಾವುದೇ ಸಂದರ್ಭದಲ್ಲೂ ಕರಾರುವಕ್ಕಾಗಿ ಬೌಲಿಂಗ್ ಮೂಲಕ ವಿಕೆಟ್ ಪಡೆಯಬಲ್ಲರು.

ಅಕ್ಷರ್ ಪಟೇಲ್: ವಿಶ್ವಕಪ್ ಟೂರ್ನಿಗೆ ಉಪ ನಾಯಕನಾಗಿ ಆಯ್ಕೆಯಾಗಿರುವ ಅಕ್ಷರ್ ಪಟೇಲ್, ಆಲ್ರೌಂಡರ್ ಆಟಗಾರನಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಅರ್ಷದೀಪ್ ಸಿಂಗ್: ಭಾರತ ಪರ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರನಾಗಿರುವ ಅರ್ಷದೀಪ್ ಸಿಂಗ್, ಪವರ್ ಪ್ಲೇ ಹಾಗೂ ಡೆತ್ ಓವರ್ಗಳಲ್ಲಿ ಎದುರಾಳಿ ತಂಡವನ್ನು ಕಟ್ಟಿ ಹಾಕುವ ಸಾಮರ್ಥ್ಯ ಹೊಂದಿದ್ದಾರೆ.

ವರುಣ್ ಚಕ್ರವರ್ತಿ: ಟಿ20 ಬೌಲಿಂಗ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನದಲ್ಲಿರುವ ವರುಣ್ ಚಕ್ರವರ್ತಿ, ತಮ್ಮ ಸ್ಪಿನ್ ಬೌಲಿಂಗ್ ಮೂಲಕ ಪಂದ್ಯದ ಗತಿಯನ್ನು ಬದಲಾಯಿಸಬಲ್ಲರು.

ಹರ್ಷಿತ್ ರಾಣಾ: ಗಂಭೀರ್ ಕೋಚ್ ಆದ ಬಳಿಕ ಭಾರತದ ಪರ ಮೂರು ಮಾದರಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಹರ್ಷಿತ್ ರಾಣಾ, ತಮ್ಮ ವೇಗದ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್ಗಳಿಗೆ ಕಾಡಬಲ್ಲರು. ಬ್ಯಾಟಿಂಗ್ನಲ್ಲೂ ಉಪಯುಕ್ತ ಆಟವಾಡುವ ಸಾಮರ್ಥ್ಯ ಹೊಂದಿದ್ದಾರೆ.

ವಾಷಿಂಗ್ಟನ್ ಸುಂದರ್: ಪಂದ್ಯದ ಯಾವುದೇ ಸಂದರ್ಭದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡಬಲ್ಲ ವಾಷಿಂಗ್ಟನ್ ಸುಂದರ್, ಇತ್ತೀಚೆಗೆ ಉತ್ತಮ ಫಾರ್ಮ್ನಲ್ಲಿಲ್ಲ. ಅದರಲ್ಲೂ ಅಕ್ಷರ್ ಪಟೇಲ್ ಉಪನಾಯಕನಾಗಿ ಆಯ್ಕೆಯಾಗಿರುವುದರಿಂದ, ವಾಷಿಂಗ್ಟನ್ಗೆ ಪ್ಲೇಯಿಂಗ್ 11ರಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ.

ರಿಂಕು ಸಿಂಗ್: ಚುಟುಕು ಕ್ರಿಕೆಟ್ನಲ್ಲಿ ಫಿನಿಷರ್ ಆಗಿ ಗುರುತಿಸಿಕೊಂಡಿರುವ ರಿಂಕು ಸಿಂಗ್, ಸ್ಪೋಟಕ ಬ್ಯಾಟಿಂಗ್ ಮೂಲಕ ಪಂದ್ಯದ ಗತಿಯನ್ನು ಬದಲಿಸಬಲ್ಲರು. ರಿಂಕು ಸಿಂಗ್ ತಂಡದಲ್ಲಿರುವುದು ಕೆಳ ಕ್ರಮಾಂಕದಲ್ಲಿ ಭಾರತ ತಂಡದ ಬ್ಯಾಟಿಂಗ್ಗೆ ಬಲ ನೀಡಲಿದೆ.
.T20 World Cup| ಗಿಲ್ ಔಟ್, ಭಾರತ ತಂಡಕ್ಕೆ ನೂತನ ಉಪನಾಯಕ: ಹೀಗಿದೆ ತಂಡ.World Cup Team: ಆ ಕಾರಣಕ್ಕೆ ಗಿಲ್ರನ್ನು ತಂಡದಿಂದ ಕೈಬಿಡಲಾಯಿತು ಎಂದ ಅಗರ್ಕರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.