ಶನಿವಾರ, ಜೂನ್ 12, 2021
28 °C

ಕೋವಿಡ್: ವೇದಾ ಕೃಷ್ಣಮೂರ್ತಿ ಅವರ ಸಹೋದರಿ ವತ್ಸಲಾ ಶಿವಕುಮಾರ್ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಡೂರು: ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ಸಹೋದರಿ ವತ್ಸಲಾ ಶಿವಕುಮಾರ್ (42) ಅವರು ಕೋವಿಡ್-19 ನಿಂದ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು ಬುಧವಾರ ಮನೆಗೆ ಮರಳಿದ್ದರು. ತಡರಾತ್ರಿ ವತ್ಸಲಾ ಅವರ ಆರೋಗ್ಯ ಏರುಪೇರಾಗಿದ್ದು, ಮೃತಪಟ್ಟಿದ್ದಾರೆ.

ಕೆಲ‌ದಿನಗಳ ಹಿಂದೆ ವೇದಾ ಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ (63) ಕೋವಿಡ್-19 ನಿಂದ ಮೃತಪಟ್ಟಿದ್ದರು. ಕಡೂರಿನ ಜಮೀನಿನಲ್ಲಿ ಗುರುವಾರ ವತ್ಸಲಾ ಮೃತದೇಹದ ಅಂತ್ಯಕ್ರಿಯೆ ಮಾಡಲಾಗಿದೆ.

ಓದಿ: ವೇದಾ ಕೃಷ್ಣಮೂರ್ತಿ ಅವರ ತಾಯಿ ಚಲುವಾಂಬದೇವಿ ಕೋವಿಡ್‌ನಿಂದ ನಿಧನ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು