ಇಂಗ್ಲೆಂಡ್‌ಗೆ ಬಂದಿಳಿದ ಭಾರತ ಕ್ರಿಕೆಟ್ ತಂಡಗಳು

ಲಂಡನ್ (ಪಿಟಿಐ): ಇದೇ ತಿಂಗಳು ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿರುವ ಭಾರತ ಕ್ರಿಕೆಟ್ ತಂಡವು ಗುರುವಾರ ಇಂಗ್ಲೆಂಡ್ ತಲುಪಿತು.
ಇದೇ ಸಂದರ್ಭದಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯ ಆಡಲಿರುವ ಭಾರತ ಮಹಿಳಾ ಕ್ರಿಕೆಟ್ ತಂಡವೂ ಇಂಗ್ಲೆಂಡ್ ಗೆ ಬಂದಿಳಿಯಿತು.
ಭಾರತ ಪುರುಷರ ತಂಡದ ಆಟಗಾರ ಕೆ.ಎಲ್. ರಾಹುಲ್ ಅವರು, ‘ತಲುಪಿದೆವು‘ ಎಂಬ ಸಂದೇಶದೊಂದಿಗೆ ಚಿತ್ರವನ್ನೂ ಟ್ವೀಟ್ ಮಾಡಿದ್ದಾರೆ. ಉಭಯ ತಂಡಗಳು ವಿಶೇಷ ವಿಮಾನದಲ್ಲಿ ಇಂಗ್ಲೆಂಡ್‌ಗೆ ಪ್ರಯಾಣಿಸಿವೆ.
ತಂಡಗಳು ಲಂಡನ್‌ನಿಂದ ಸೌತಾಂಪ್ಟನ್‌ಗೆ ತೆರಳಿದವು. ಅಲ್ಲಿ ಆಟಗಾರರು ಕಡ್ಡಾಯ ಕ್ವಾರಂಟೈನ್ ನಿಯಮ ಪಾಲಿಸುವರು. ಪ್ರತ್ಯೇಕವಾಸದ ಅವಧಿ ಮುಗಿದ ನಂತರ ಕೋವಿಡ್ –19 ಸೋಂಕು ಪತ್ತೆ ಪರೀಕ್ಷೆಗೊಳಗಾಗುವರು.
ಜೂನ್ 18ರಂದು ಸೌತಾಂಪ್ಟನ್‌ನಲ್ಲಿಯೇ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ನಡೆಯಲಿದೆ.
ಆಗಸ್ಟ್ ನಾಲ್ಕರಿಂದ ನಾಟಿಂಗ್‌ಹ್ಯಾಮ್‌ನಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಆಟಗಾರರಿಗೆ ತಮ್ಮ ಕುಟುಂಬದ ಸದಸ್ಯರೊಂದಿಗೆ ತೆರಳಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು ಅನುಮತಿ ನೀಡಿದೆ.
ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವಣ ಟೆಸ್ಟ್ ಮತ್ತು ಸೀಮಿತ ಓವರ್‌ಗಳ ಸರಣಿಯು ಜುಲೈ 15ರಂದು ಮುಕ್ತಾಯವಾಗಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.