ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಬಳಿಕ ಟೀಂ ಇಂಡಿಯಾಕ್ಕೆ ಮೂರು ವಾರ ವಿರಾಮ

Last Updated 9 ಜೂನ್ 2021, 14:30 IST
ಅಕ್ಷರ ಗಾತ್ರ

ಲಂಡನ್: ದೀರ್ಘಾವಧಿಯ ಪಂದ್ಯ ಮತ್ತು ಬಯೋಬಬಲ್‌ನಿಂದಾಗುವ ಮಾನಸಿಕ ಒತ್ತಡ ಪರಿಹಾರಕ್ಕಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಬಳಿಕ ಟೀಂ ಇಂಡಿಯಾಕ್ಕೆ ಮೂರು ವಾರಗಳ ವಿರಾಮ ನೀಡಲು ತಂಡದ ಆಡಳಿತ ಮಂಡಳಿ ನಿರ್ಧರಿಸಿದೆ.

ಫೈನಲ್ ಪಂದ್ಯವು ಸೌತಾಂಪ್ಟನ್‌ನಲ್ಲಿ ಜೂನ್ 18ರಿಂದ 22ರ ವರೆಗೆ ನಡೆಯಲಿದ್ದು, ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಫೈನಲ್ ಪಂದ್ಯದ ಬಳಿಕ ಮೂರು ವಾರಗಳ ಬಿಡುವು ಪಡೆಯಲಿರುವ ಭಾರತ ತಂಡವು ಜುಲೈ 14ರಂದು ಇಂಗ್ಲೆಂಡ್ ವಿರುದ್ಧದ ಸರಣಿಗೆ ತಯಾರಿ ಆರಂಭಿಸಲಿದೆ. ಬಳಿಕ ಆಗಸ್ಟ್ 14ರಿಂದ ಆತಿಥೇಯ ಇಂಗ್ಲೆಂಡ್ ಎದುರು ಐದು ಪಂದ್ಯಗಳ ಸರಣಿಯನ್ನಾಡಲಿದೆ.

‘ಇಂಗ್ಲೆಂಡ್‌ಗೆ ತೆರಳುವುದಕ್ಕೂ ಮುನ್ನ ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿಶಾಸ್ತ್ರಿ ಮಾಧ್ಯಮಗಳಿಗೆ ತಿಳಿಸಿರುವಂತೆ, ವಿರಾಮ ಇರಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧ ಸರಣಿ ನಡುವೆ 6 ವಾರಗಳ ಅಂತರ ಇರಲಿದೆ. ಇದರಿಂದ ಆಟಗಾರರ ಮಾನಸಿಕ ಆರೋಗ್ಯ ಕಾಪಾಡಲು ಸಾಧ್ಯ. ರಜಾ ದಿನಗಳಲ್ಲಿ ಆಟಗಾರರು ಬ್ರಿಟನ್‌ನಲ್ಲಿ ಸ್ನೇಹಿತರು ಮತ್ತು ಕುಟುಂಬದವರ ಭೇಟಿಗೆ ತೆರಳಬಹುದು’ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT