ಭಾನುವಾರ, ಡಿಸೆಂಬರ್ 5, 2021
27 °C

DNP ಸ್ಕಾಟ್ಲೆಂಡ್ ಡ್ರೆಸಿಂಗ್ ಕೊಠಡಿಯಲ್ಲಿ ಕೊಹ್ಲಿ ಬಳಗದ ಸಂಚಲನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ಟ್ವೆಂಟಿ–20 ವಿಶ್ವಕಪ್ ಟೂರ್ನಿಯಲ್ಲಿ ಗೆದ್ದ ನಂತರ ಎದುರಾಳಿ ತಂಡವಾದ ಸ್ಕಾಟ್ಲೆಂಡ್‌ನ ಡ್ರೆಸಿಂಗ್ ಕೊಠಡಿಗೆ ತೆರಳಿ ಅನುಭವಗಳನ್ನು ಹಂಚಿಕೊಂಡ ಭಾರತ ತಂಡದ ಆಟಗಾರರು ಕ್ರಿಕೆಟ್‌ ಜಗತ್ತಿನ ಗಮನ ಸೆಳೆದಿದ್ದಾರೆ.

ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಳಗ ಸ್ಕಾಟ್ಲೆಂಡ್ ಎದುರು ಜಯ ಗಳಿಸಿತ್ತು. ಪಂದ್ಯದ ನಂತರ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ, ಆರಂಭಿಕ ಬ್ಯಾಟರ್ ಕೆ.ಎಲ್‌.ರಾಹುಲ್, ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಮತ್ತು ರವಿಚಂದ್ರನ್ ಅಶ್ವಿನ್ ಮತ್ತು ಪೋಷಕ್ ಮಹೇಂದ್ರ ಸಿಂಗ್ ಧೋನಿ ಅವರು ಸ್ಕಾಟ್ಲೆಂಡ್ ಆಟಗಾರರ ಜೊತೆ ಮಾತುಕತೆ ನಡೆಸಿದ್ದರು. 

ಇದರಿಂದ ಪುಳಕಗೊಂಡ ಕ್ರಿಕೆಟ್ ಸ್ಕಾಟ್ಲೆಂಡ್‌ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದು ವಿರಾಟ್ ಕೊಹ್ಲಿ ಮತ್ತು ತಂಡದ ಮೇಲಿನ ಗೌರವ ನೂರ್ಮಡಿಯಾಗಿದೆ ಎಂದು ಹೇಳಿದೆ. ಆಟಗಾರರು ಮಾತುಕತೆಯಲ್ಲಿ ತೊಡಗಿರುವ ಚಿತ್ರಗಳನ್ನು ಕೂಡ ಪೋಸ್ಟ್ ಮಾಡಿದ್ದು ಬೆಲೆ ಕಟ್ಟಲಾಗದ ಸೌಹಾರ್ದ ಎಂದು ಬಣ್ಣಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.