ಬುಧವಾರ, ಆಗಸ್ಟ್ 10, 2022
22 °C

ಮಿಲ್ಖಾ ಸಿಂಗ್ ಸ್ಮರಣೆ: ತೋಳಿಗೆ ಕಪ್ಪುಪ‍ಟ್ಟಿ ಧರಿಸಿ ಕಣಕ್ಕಿಳಿದ ಭಾರತದ ಆಟಗಾರರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಸೌತಾಂಪ್ಟನ್‌: ಕೋವಿಡ್‌ನಿಂದಾಗಿ ಮೃತಪಟ್ಟ ದಿಗ್ಗಜ ಅಥ್ಲೀಟ್‌ ಮಿಲ್ಖಾ ಸಿಂಗ್ ಅವರ ಸ್ಮರಣಾರ್ಥ ಭಾರತ ಕ್ರಿಕೆಟ್ ತಂಡದ ಆಟಗಾರರು ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ನಲ್ಲಿ ತೋಳಿಗೆ ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದರು.

‘ಫ್ಲೈಯಿಂಗ್ ಸಿಖ್‌‘ ಖ್ಯಾತಿಯ ಮಿಲ್ಖಾ ಸಿಂಗ್‌ (91) ಶುಕ್ರವಾರ ಕೊನೆಯುಸಿರೆಳೆದಿದ್ದರು. ಭಾರತ ತಂಡದ ಆಟಗಾರರು ನ್ಯೂಜಿಲೆಂಡ್ ಎದುರು ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶನಿವಾರ ಕಪ್ಪುಪಟ್ಟಿ ಧರಿಸಿ ಆಡುವ ಮೂಲಕ ಅವರಿಗೆ ಗೌರವ ಸಲ್ಲಿಸಿದರು.

ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಭಾರತದ ಪ್ರಮುಖ ಆಟಗಾರರು ಮತ್ತು ಕೋಚ್ ರವಿ ಶಾಸ್ತ್ರಿ ಈಗಾಗಲೇ ಮಿಲ್ಖಾ ಸಿಂಗ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಒಲಿಂಪಿಯನ್‌ ಕ್ರೀಡಾಪಟುವೊಬ್ಬರಿಗೆ ಭಾರತ ಕ್ರಿಕೆಟ್ ತಂಡವು ಕಪ್ಪುಪಟ್ಟಿ ಧರಿಸಿ ಗೌರವ ಸೂಚಿಸಿರುವುದು ಅಪರೂಪದ ಸಂದರ್ಭಗಳಲ್ಲಿ ಒಂದಾಗಿದೆ.

‘ಕೋವಿಡ್‌ನಿಂದಾಗಿ ಮೃತಪಟ್ಟಿರುವ ಮಿಲ್ಖಾ ಸಿಂಗ್‌ಜೀ ಅವರ ಸ್ಮರಣೆಗಾಗಿ ಭಾರತ ಕ್ರಿಕೆಟ್ ತಂಡದ ಆಟಗಾರರು ಕಪ್ಪುಪಟ್ಟಿ ಧರಿಸಿದ್ದಾರೆ‘ ಎಂದು ಬಿಸಿಸಿಐ ಮೀಡಿಯಾ ಸೆಲ್ ಪೋಸ್ಟ್ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು