ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌ 2021: ಇಂದು ಡೆಲ್ಲಿ–ರಾಜಸ್ಥಾನ ಕದನ

Last Updated 24 ಸೆಪ್ಟೆಂಬರ್ 2021, 19:30 IST
ಅಕ್ಷರ ಗಾತ್ರ

ಅಬುಧಾಬಿ: ಶನಿವಾರ ಎರಡು ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಸೆಣಸಲಿವೆ.

ರಿಷಭ್ ಪಂತ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಹಂತದಲ್ಲಿ ಅಮೋಘ ಸಾಮರ್ಥ್ಯ ತೋರಿತ್ತು. ಎರಡನೇ ಹಂತದ ಮೊದಲ ಪಂದ್ಯದಲ್ಲೂ ಅದೇ ಲಯದಲ್ಲಿ ಆಡಿ ಎಂಟು ವಿಕೆಟ್‌ಗಳ ಜಯ ಸಾಧಿಸಿತ್ತು. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ.

ಮೊದಲ ಹಂತದಲ್ಲಿ ಸೋಲು–ಗಲುವಿನ ಹಾವು–ಏಣಿ ಆಟವಾಡಿದ್ದ ರಾಜಸ್ಥಾನ್ ಎರಡನೇ ಹಂತದ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಎರಡು ರನ್‌ಗಳ ಜಯ ಗಳಿಸುವ ಮೂಲಕ ಭರವಸೆಯ ಪಥದಲ್ಲಿದೆ. ಡೆಲ್ಲಿ ವಿರುದ್ಧ ಜಯ ಗಳಿಸಿದರೆ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದ್ದು ಪ್ಲೇ ಆಫ್‌ ಹಂತಕ್ಕೇರುವ ಹಾದಿ ಸುಗಮವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT