ಬುಧವಾರ, ಮೇ 18, 2022
28 °C

ಇಂದು ನೆಟ್ಸ್‌ಗೆ ಇಳಿಯಲಿರುವ ಭಾರತ–ಇಂಗ್ಲೆಂಡ್ ಆಟಗಾರರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಆರು ದಿನಗಳ ಕ್ವಾರಂಟೈನ್ ಮುಗಿಸಿದ ಭಾರತ ಕ್ರಿಕೆಟ್ ತಂಡದ ಆಟಗಾರರು ಸೋಮವಾರ ಮೊದಲ ಬಾರಿ ಹೊರಾಂಗಣಕ್ಕೆ ಇಳಿದರು. ಮೊದಲ ಟೆಸ್ಟ್‌ಗೆ ಸಿದ್ಧತೆ ನಡೆಸುತ್ತಿರುವ ತಂಡ ಕೆಲಕಾಲ ಕಸರತ್ತು ನಡೆಸಿತು. ಮಂಗಳವಾರ ಬೆಳಿಗ್ಗೆ ಉಭಯ ತಂಡಗಳ ಆಟಗಾರರು ನೆಟ್ಸ್‌ನಲ್ಲಿ ಅಭ್ಯಾಸ ಮಾಡಲಿದ್ದಾರೆ ಎಂದು ಮಾಧ್ಯಮ ಅಧಿಕಾರಿಯೊಬ್ಬರು ತಿಳಿಸಿದರು. 

ಎರಡೂ ತಂಡಗಳ ಆಟಗಾರರು ಮೂರು ಬಾರಿ ಕೋವಿಡ್‌–19 ಪರೀಕ್ಷೆಗೆ ಒಳಗಾಗಿದ್ದು ಎಲ್ಲರ ವರದಿ ನೆಗೆಟಿವ್ ಬಂದಿದೆ ಎಂದು ತಿಳಿಸಲಾಗಿದೆ.

ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯ ನಂತರ ಇಲ್ಲಿಗೆ ಬಂದ ಭಾರತ ತಂಡದ ಆಟಗಾರರು ಕಳೆದ ಬುಧವಾರ ಹೋಟೆಲ್ ಒಂದರಲ್ಲಿ ಜೀವಸುರಕ್ಷಾ ವಲಯವನ್ನು ಪ್ರವೇಶಿಸಿದ್ದರು. ಇಂಗ್ಲೆಂಡ್ ತಂಡ ಶ್ರೀಲಂಕಾದಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಿ ಇಲ್ಲಿಗೆ ಬಂದಿತ್ತು. ತಂಡದ ನೆಟ್ಸ್ ಅಭ್ಯಾಸ ಮಂಗಳವಾರ ಮಧ್ಯಾಹ್ನದ ನಂತರ ನಡೆಯಲಿದೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ವಕ್ತಾರರು ವಿವರಿಸಿದ್ದಾರೆ.

ಇಂಗ್ಲೆಂಡ್ ತಂಡದ ಬೆನ್‌ ಸ್ಟೋಕ್ಸ್‌, ಜೊಫ್ರಾ ಆರ್ಚರ್ ಮತ್ತು ರೋರಿ ಬರ್ನ್ಸ್‌ ಶ್ರೀಲಂಕಾಗೆ ತೆರಳಿರಲಿಲ್ಲ. ಆದ್ದರಿಂದ ಮೊದಲೇ ಇಲ್ಲಿಗೆ ಬಂದು ಕ್ವಾರಂಟೈನ್ ಮುಗಿಸಿದ್ದಾರೆ. ಹೀಗಾಗಿ ಈಗಾಗಲೇ ತರಬೇತಿ ಆರಂಭಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು