ಮಂಗಳವಾರ, ಆಗಸ್ಟ್ 3, 2021
26 °C

ಇಂಗ್ಲೆಂಡ್‌ನಲ್ಲಿ ಭಾರತ ತಂಡದ ವಿಹಾರಕ್ಕಿಲ್ಲ ಅಡೆ ತಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಂಡನ್: ಇಂಗ್ಲೆಂಡ್ ಏಕದಿನ ಕ್ರಿಕೆಟ್ ತಂಡದಲ್ಲಿ ಕೋರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಆದರೆ, ಮುಂದಿನ ತಿಂಗಳು ನಡೆಯಲಿರುವ ಟೆಸ್ಟ್‌ ಸರಣಿಯಲ್ಲಿ ಆಡಲಿರುವ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡದ ರಜೆ ಮುಂದುವರೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.

ಜುಲೈ 14ರವರೆಗೂ ಭಾರತ ತಂಡದ ಆಟಗಾರರು ಬಯೋಬಬಲ್‌ನಿಂದ ಹೊರಗಿದ್ದು ವಿಹಾರ ನಡೆಸಲು ಅವಕಾಶ ನೀಡಲಾಗಿದೆ. ಆಮೇಲೆ ಅಭ್ಯಾಸ ಪಂದ್ಯಗಳನ್ನು ಆಡಲು ತಂಡವು ಲಂಡನ್‌ನಲ್ಲಿ ಜೊತೆಗೂಡಲಿದೆ. 

‘ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ. ಇಸಿಬಿ ಮತ್ತು ಸ್ಥಳೀಯ ಆರೋಗ್ಯ ಸಿಬ್ಬಂದಿಯ ಸಂಪರ್ಕದಲ್ಲಿದ್ದೇವೆ. ಹೊಸದಾಗಿ ಶಿಷ್ಟಾಚಾರ ಜಾರಿಗೆ ತರುವುದಾದರೆ ಅವರು ತಿಳಿಸುತ್ತಾರೆ. ಕೂಡಲೇ ಪಾಲಿಸಲಾಗುವುದು. ಅಲ್ಲಿಯವರೆಗೂ ಯಥಾಸ್ಥಿತಿ ಮುಂದುವರಿಯುವುದು‘ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು