ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್‌ ಪ್ರವಾಸದಿಂದ ಹಿಂದೆ ಸರಿದ ಭಾರತದ ಮಹಿಳಾ ‌ಕ್ರಿಕೆಟ್ ತಂಡ

Last Updated 21 ಜುಲೈ 2020, 13:23 IST
ಅಕ್ಷರ ಗಾತ್ರ

ಲಂಡನ್‌: ಭಾರತ ಮಹಿಳಾ ಕ್ರಿಕೆಟ್‌ ತಂಡವು ಪ್ರಸ್ತಾವಿತ ಇಂಗ್ಲೆಂಡ್‌ ಪ್ರವಾಸದಿಂದ ಹಿಂದೆ ಸರಿದಿದೆ ಎಂದು ಬಿಬಿಸಿ ವರದಿ ಮಾಡಿದೆ. ಕೋವಿಡ್‌–19 ಪಿಡುಗಿನ ಹಿನ್ನೆಲೆಯಲ್ಲಿ ಈ ನಿರ್ಧಾರ ತಳೆಯಲಾಗಿದೆ ಎಂದು ತಿಳಿದುಬಂದಿದೆ.

ಭಾರತದ ಮಹಿಳಾ ತಂಡವು ಜೂನ್‌–ಜುಲೈನಲ್ಲಿ ಇಂಗ್ಲೆಂಡ್‌ ವಿರುದ್ಧ ತಲಾ ಮೂರು ಏಕದಿನ ಮತ್ತು ಟ್ವೆಂಟಿ–20 ಪಂದ್ಯಗಳ ದ್ವಿಪಕ್ಷೀಯ ಸರಣಿಗಳನ್ನು ಆಡಬೇಕಿತ್ತು. ಆದರೆ ಕೋವಿಡ್‌–19 ಸೋಂಕು ಪ್ರಕರಣಗಳಲ್ಲಿ ಏರಿಕೆಯ ಕಾರಣ ಸರಣಿಯನ್ನು ಮುಂದೂಡಲಾಗಿತ್ತು.

ಆದಾಗ್ಯೂ ಸೆಪ್ಟೆಂಬರ್‌ನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳನ್ನು ಕರೆಸಿ ತ್ರಿಕೋನ ಸರಣಿ ಆಡಿಸುವ ಕುರಿತು ಆ ದೇಶದ ಮಂಡಳಿಗಳೊಡನೆ ಮಾತುಕತೆ ನಡೆಸುತ್ತಿರುವುದಾಗಿ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ಹೇಳಿತ್ತು.

‘ಈ ವರ್ಷದ ಬೇಸಿಗೆಯ ಅಂತ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್‌ಗೆ ಬರುವುದಿತ್ತು. ಹೀಗಾಗಿ ಭಾರತ ತಂಡವನ್ನೂ ಕರೆಸಿ ತ್ರಿಕೋನ ಸರಣಿ ಆಡಿಸುವ ವಿಶ್ವಾಸವಿತ್ತು. ಆದರೆ ಭಾರತದಲ್ಲಿ ಕೋವಿಡ್‌–19 ಸೋಂಕು ಪ್ರಕರಣಗಳು ಏರುಗತಿಯಲ್ಲಿ ಸಾಗಿರುವುದರಿಂದ ಅಲ್ಲಿನ ತಂಡಕ್ಕೆ ಪ್ರವಾಸ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ‘ ಎಂದು ಬಿಬಿಸಿ ವರದಿ ಮಾಡಿದೆ.

’ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಸರಣಿಯನ್ನು ಇಂಗ್ಲೆಂಡ್‌ ವಿಸ್ತರಿಸಲಿದೆ ಎಂದು ತಿಳಿದುಬಂದಿದೆ‘ ಎಂಬುದಾಗಿ ವರದಿ ಹೇಳಿದೆ.

ಭಾರತದಲ್ಲಿ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ರಿಕೆಟ್‌ ಆಟಗಾರರು ಯಾವಾಗ ತರಬೇತಿ ಆರಂಭಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT