ಬುಧವಾರ, ಜೂನ್ 16, 2021
23 °C

ಕ್ರಿಕೆಟ್‌: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಆಡಲಿರುವ ಭಾರತದ ಮಹಿಳೆಯರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡವು ಮುಂದಿನ ತಿಂಗಳು ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಬಳಿಕ ಆಸ್ಟ್ರೇಲಿಯಾ ವಿರುದ್ಧವೂ ಏಕೈಕ ಟೆಸ್ಟ್‌ನಲ್ಲಿ ಆಡಲಿದೆ.

ಭಾರತದ ಆಟಗಾರ್ತಿಯರು ಏಳು ವರ್ಷಗಳ ಬಳಿಕ ಇಂಗ್ಲೆಂಡ್‌ನಲ್ಲಿ ಮೊದಲ ಟೆಸ್ಟ್ ಆಡಲಿದ್ದು, ಜೂನ್‌ 16ರಿಂದ ಈ ಪಂದ್ಯ ನಡೆಯಲಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಮತ್ತೊಂದು ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಬಳಿಕ ಏಕದಿನ ಮತ್ತು ಟ್ವೆಂಟಿ–20 ಪಂದ್ಯಗಳನ್ನೂ ಆಡಲಿದ್ದಾರೆ.

‘ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಇನ್ನೂ ಟೆಸ್ಟ್ ಆಡುತ್ತಿರುವ ತಂಡಗಳಾಗಿವೆ. ಆ ತಂಡಗಳು ಭಾರತಕ್ಕೆ ಬಂದಾಗ ಅಥವಾ ಭಾರತವು ಆ ದೇಶಗಳ ಪ್ರವಾಸ ಕೈಗೊಳ್ಳಲು ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ‘ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಪುರುಷರ ತಂಡದ ಪಿಂಕ್‌ಬಾಲ್ ಟೆಸ್ಟ್ ಹಿನ್ನೆಲೆಯಲ್ಲಿ ಹಾಗೂ ಕಳೆದ ತಿಂಗಳು ನಡೆದ ಬಿಸಿಸಿಐ ಅಪೆಕ್ಸ್ ಸಮಿತಿ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿತ್ತು‘ ಎಂದು ಅವರು ಹೇಳಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸ ಕುರಿತು ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಆದರೆ ಸೆಪ್ಟೆಂಬರ್‌ನಲ್ಲಿ ಭಾರತದ ವಿರುದ್ಧದ ಸರಣಿಗೆ ಚಿಂತನೆ ನಡೆಯುತ್ತಿದೆ ಎಂದು ಆಸ್ಟ್ರೇಲಿಯಾ ತಂಡದ ವೇಗಿ ಮೇಗನ್ ಶುಟ್‌ ಈ ತಿಂಗಳ ಆರಂಭದಲ್ಲಿ ಹೇಳಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು