ಮಂಗಳವಾರ, ಆಗಸ್ಟ್ 16, 2022
29 °C

ಮಹಿಳಾ ಕ್ರಿಕೆಟ್‌: ಡಿಸೆಂಬರ್‌ನಲ್ಲಿ ಭಾರತ–ಆಸ್ಟ್ರೇಲಿಯಾ ಟಿ20 ಸರಣಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮೆಲ್ಬರ್ನ್‌: ಭಾರತ ಮಹಿಳಾ ಕ್ರಿಕೆಟ್ ತಂಡವು ತವರಿನಲ್ಲಿ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಡಿಸೆಂಬರ್‌ನಲ್ಲಿ ಆಡಲಿದೆ.

ಕ್ರಿಕೆಟ್‌ ಆಸ್ಟ್ರೇಲಿಯಾ ಬಿಡುಗಡೆ ಮಾಡಿರುವ ವೇಳಾಪಟ್ಟಿಯಲ್ಲಿ ಈ ಕುರಿತು ಪ್ರಸ್ತಾಪಿಸಲಾಗಿದ್ದು, ದಿನಾಂಕ ಮತ್ತು ಪಂದ್ಯಗಳು ನಡೆಯುವ ಸ್ಥಳಗಳನ್ನು ಖಚಿತಪಡಿಸಿಲ್ಲ.

ಭಾರತ ತಂಡವು ಮಾರ್ಚ್‌ನಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಕೊನೆಯ ಪಂದ್ಯ ಆಡಿತ್ತು. ಬರ್ಮಿಂಗ್‌ಹ್ಯಾಮ್‌ನಲ್ಲಿ ಜುಲೈನಲ್ಲಿ ನಿಗದಿಯಾಗಿರುವ ಕಾಮನ್‌ವೆಲ್ತ್ ಗೇಮ್ಸ್, ಬಳಿಕ ಸೆಪ್ಟೆಂಬರ್‌ನಲ್ಲಿ ಇಂಗ್ಲೆಂಡ್‌ನಲ್ಲಿ ಆ ತಂಡದ ಎದುರು ಏಕದಿನ ಮತ್ತು ಟಿ20 ಸರಣಿಯಲ್ಲಿ ಭಾಗವಹಿಸಲಿದೆ.

ಆಸ್ಟ್ರೇಲಿಯಾ ಪುರುಷರ ತಂಡವೂ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಆಗಮಿಸಲಿದ್ದು, ಆತಿಥೇಯ ತಂಡದ ಎದುರು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡಲಿದೆ. ಈ ವರ್ಷ ಅಕ್ಟೋಬರ್ 17ರಿಂದ ನವೆಂಬರ್‌ 14ರವರೆಗೆ ನಡೆಯಲಿರುವ ಟಿ20 ವಿಶ್ವಕಪ್‌ ಟೂರ್ನಿಗೆ ಈ ಸರಣಿ ಪೂರ್ವಸಿದ್ಧತೆಯಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು