ಜೂಲನ್ ನಂಬರ್ ಒನ್‌

ಮಂಗಳವಾರ, ಮಾರ್ಚ್ 26, 2019
31 °C

ಜೂಲನ್ ನಂಬರ್ ಒನ್‌

Published:
Updated:
Prajavani

ದುಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಬೌಲರ್ ಜೂಲನ್ ಗೋಸ್ವಾಮಿ ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಮುಂಬೈನಲ್ಲಿ ನಡೆದಿದ್ದ ಇಂಗ್ಲೆಂಡ್‌ ಎದುರಿನ ಏಕದಿನ ಕ್ರಿಕೆಟ್‌ ಸರಣಿಯಲ್ಲಿ ತೋರಿದ ಅಮೋಘ ಸಾಮರ್ಥ್ಯ ಅವರಿಗೆ ಈ ಸ್ಥಾನ ಗಳಿಸಿಕೊಟ್ಟಿದೆ.

ಭಾರತದ ಮಧ್ಯಮ ಕ್ರಮಾಂಕದ ಬೌಲರ್‌ ಶಿಖಾ ಪಾಂಡೆ ಒಟ್ಟು 12 ಸ್ಥಾನಗಳ ಏರಿಕೆ ಕಂಡಿದ್ದು ಐದನೇ ಸ್ಥಾನಕ್ಕೇರಿದ್ದಾರೆ. ಭಾರತದ ಇಬ್ಬರು ಬೌಲರ್‌ಗಳು ಅಗ್ರ ಐದರಲ್ಲಿ ಜೊತೆಯಾಗಿ ಕಾಣಿಸಿಕೊಂಡಿರುವುದು ಇದು ಎರಡನೇ ಬಾರಿ. 2010ರಲ್ಲಿ ಜೂಲನ್ ಮತ್ತು ರುಮೇಲಿ ಧರ್‌ ಈ ಸಾಧನೆ ಮಾಡಿದ್ದರು.

ಇಂಗ್ಲೆಂಡ್‌ ವಿರುದ್ಧದ ಸರಣಿಯಲ್ಲಿ 2–1ರ ಗೆಲುವು ಸಾಧಿಸಿದ ಭಾರತ ತಂಡ ಎರಡನೇ ಸ್ಥಾನ ಗಳಿಸಿದೆ. ನ್ಯೂಜಿಲೆಂಡ್ ಮೊದಲ ಸ್ಥಾನದಲ್ಲಿದೆ. ಈ ಮೂಲಕ ನ್ಯೂಜಿಲೆಂಡ್‌ ತಂಡ 2021ರ ವಿಶ್ವಕಪ್‌ ಟೂರ್ನಿಗೆ ನೇರವಾಗಿ ಅರ್ಹತೆ ಗಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !