ಶನಿವಾರ, ಮಾರ್ಚ್ 28, 2020
19 °C

ಕ್ರಿಕೆಟ್‌: ಅಭ್ಯಾಸ ಪಂದ್ಯ ರದ್ದು

ಪಿಟಿಐ Updated:

ಅಕ್ಷರ ಗಾತ್ರ : | |

ಬ್ರಿಸ್ಬೇನ್: ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಬೇಕಿದ್ದ ಟ್ವೆಂಟಿ–20 ವಿಶ್ವಕಪ್‌ ಟೂರ್ನಿಯ ಅಭ್ಯಾಸ ಪಂದ್ಯ ಭಾನುವಾರ ಭಾರೀ ಮಳೆಯ ಕಾರಣ ಒಂದೂ ಎಸೆತ ಕಾಣದೆ ರದ್ದಾಗಿದೆ. ಇದರಿಂದ ಹರ್ಮನ್‌ಪ್ರೀತ್‌ ಪಡೆಯ ಅಭ್ಯಾಸಕ್ಕೆ ಅಡ್ಡಿಯಾಗಿದೆ.

ಫೆಬ್ರುವರಿ 18ರಂದು ನಡೆಯುವ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ಮಹಿಳೆಯರು ವೆಸ್ಟ್‌ ವಿಂಡೀಸ್‌ ವಿರುದ್ಧ ಸೆಣಸಲಿದ್ದಾರೆ.

ಇದೇ 21ರಿಂದ ವಿಶ್ವಕಪ್‌ ಆರಂಭವಾಗಲಿದ್ದು, ಹರ್ಮನ್‌ಪ್ರೀತ್‌ ಪಡೆಯು ಹಾಲಿ ಚಾಂಪಿಯನ್‌ ಹಾಗೂ ನಾಲ್ಕು ಬಾರಿ ವಿಶ್ವಕಪ್‌ ವಿಜೇತ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಈ ಹಣಾಹಣಿ ಸಿಡ್ನಿಯಲ್ಲಿ ನಡೆಯಲಿದೆ.

ಆಡಿಲೇಡ್‌ನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವು ನ್ಯೂಜಿಲೆಂಡ್‌ ತಂಡವನ್ನು ಆರು ವಿಕೆಟ್‌ಗಳಿಂದ ಮಣಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು