ಮಂಗಳವಾರ, ನವೆಂಬರ್ 29, 2022
29 °C

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ತಂಡ ಪ್ರಕಟ: ಶಿಖರ್ ಧವನ್‌ಗೆ ನಾಯಕತ್ವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆಬಿಸಿಸಿಐ ಆಯ್ಕೆ ಸಮಿತಿಯು ಭಾನುವಾರ ತಂಡವನ್ನು ಪ್ರಕಟಿಸಿದೆ. ‌

ಶಿಖರ್‌ ಧವನ್‌ ಅವರಿಗೆ ನಾಯಕತ್ವ ನೀಡಲಾಗಿದ್ದು, ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. 

ಇದೇ 6ರಿಂದ ಸರಣಿ ಆರಂಭವಾಗಲಿದ್ದು, 11ರಂದು ಅಂತಿಮ ಹಣಾಹಣಿ ನಡೆಯಲಿದೆ. ಮೊದಲ ಪಂದ್ಯ ಲಖನೌ  ಕ್ರೀಡಾಂಗಣದಲ್ಲಿ ನಡೆಯಲಿದೆ. 

ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್‌ ಗಿಲ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್‌ ಕೀಪರ್‌), ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಶಹಾಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್‌.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು