ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ಇನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ; ಆಘಾತ ನೀಡಿದ ಇಶಾಂತ್‌ ಶರ್ಮಾ

ಟೆಸ್ಟ್‌ ಕ್ರಿಕೆಟ್‌
Last Updated 13 ಅಕ್ಟೋಬರ್ 2019, 4:41 IST
ಅಕ್ಷರ ಗಾತ್ರ

ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಂಗಳದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಆರಂಭದಲ್ಲಿಯೇ ದಕ್ಷಿಣ ಆಫ್ರಿಕಾ ತಂಡಕ್ಕೆ ಇಶಾಂತ್‌ ಶರ್ಮಾ ಆಘಾತ ನೀಡಿದರು.

275 ರನ್‌ಗಳಿಗೆ ಎಲ್ಲ ವಿಕೆಟ್‌ ಕಳೆದುಕೊಂಡ ದಕ್ಷಿಣ ಆಫ್ರಿಕಾ 326ರನ್‌ ಹಿನ್ನಡೆ ಸಾಧಿಸಿತು. ಭಾನುವಾರ ಎರಡನೇ ಇನಿಂಗ್ಸ್‌ ಆರಂಭಿಸಿರುವ ದಕ್ಷಿಣ ಆಫ್ರಿಕಾ ಮೊದಲ ಓವರ್‌ನ ಎರಡನೇ ಎಸೆತದಲ್ಲಿ ಏಡನ್‌ ಮರ್ಕರಂ(0) ವಿಕೆಟ್‌ ಕಳೆದುಕೊಂಡಿತು. ಎಲ್‌ಬಿಡಬ್ಲ್ಯು ಬಲೆಗೆ ಬೀಳಿಸುವ ಮೂಲಕ ವೇಗದ ಬೌಲರ್‌ ಇಶಾಂತ್‌ ಶರ್ಮಾ ಈ ಇನಿಂಗ್ಸ್‌ನ ಮೊದಲ ವಿಕೆಟ್‌ ಪಡೆದರು.

ಆರಂಭಿಕ ಆಘಾತದಿಂದ ಹೊರಬರುವ ಮುನ್ನವೇ ಉಮೇಶ್‌ ಯಾದವ್‌ ಅವರುತಿಯಾನಿಸ್‌ ಡಿ ಬ್ರಯನ್‌(8) ವಿಕೆಟ್‌ ಪಡೆಯುವ ಮೂಲಕ ದಕ್ಷಿಣ ಆಫ್ರಿಕಾ ತಂಡವನ್ನು ಮತ್ತೆ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.ಡೀನ್‌ ಎಲ್ಗರ್‌(14) ಮತ್ತು ನಾಯಕ ಫಾಫ್‌ ಡು ಪ್ಲೆಸಿಸ್‌(2) ಬ್ಯಾಟಿಂಗ್‌ ಮುಂದುವರಿಸಿದ್ದು, 7.3ಓವರ್‌ಗಳಲ್ಲಿ 2ವಿಕೆಟ್‌ಗೆ 28 ರನ್‌ ದಾಖಲಾಗಿದೆ.

ಮಯಂಕ್ ಅಗರವಾಲ್ ಶತಕ ಮತ್ತು ನಾಯಕ ವಿರಾಟ್ ಕೊಹ್ಲಿಯ ದ್ವಿಶತಕದ ಬಲದಿಂದ ಭಾರತ ತಂಡವು ಮೊದಲ ಇನಿಂಗ್ಸ್‌ನಲ್ಲಿ 601 ರನ್‌ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಶುಕ್ರವಾರ ಸಂಜೆ ಬ್ಯಾಟಿಂಗ್ ಆರಂಭಿಸಿದ್ದ ಪ್ರವಾಸಿ ಬಳಗವು 15 ಓವರ್‌ಗಳಲ್ಲಿ 36 ರನ್‌ ಗಳಿಸಿ ಮೂರು ವಿಕೆಟ್ ಕಳೆದುಕೊಂಡಿತ್ತು. ಶನಿವಾರ ಭಾರತದ ಆಫ್‌ಸ್ಪಿನ್ನರ್ ಆರ್. ಅಶ್ವಿನ್ ಅವರ ಶಿಸ್ತಿನ ಬೌಲಿಂಗ್‌ ಎದುರು ದಕ್ಷಿಣ ಆಫ್ರಿಕಾ ಬ್ಯಾಟ್ಸ್‌ಮನ್‌ ಹೆಚ್ಚು ಸಮಯ ನಿಲ್ಲಲು ಸಾಧ್ಯವಾಗಲಿಲ್ಲ. ಕೇಶವ್‌ ಮಹಾರಾಜ್‌(72) ಪ್ರತಿರೋಧ ತೋರಿದರಾದರೂ ಅಶ್ವಿನ್‌ ಎಸೆತದಲ್ಲಿಯೇ ವಿಕೆಟ್‌ ಕಳೆದುಕೊಂಡರು. ಅಶ್ವಿನ್‌ ನಾಲ್ಕು ವಿಕೆಟ್‌ ಕಬಳಿಸಿ ಯಶಸ್ವಿ ಬೌಲರ್‌ ಎನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT